Breaking News

ಸ್ವಾತಂತ್ರ್ಯ ಸಂಗ್ರಾಮಕ್ಕೆ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ಮರೆಯಬಾರದು: ಡಾ. ಅರುಣಕುಮಾರ. ಸಿ.

ಧಾರವಾಡ: ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಯಲ್ಲಿ ಅಗಸ್ಟ್ 15, 2024 ರಂದು 78ನೇ ಸ್ವಾತಂತ್ರ್ಸೋವದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ಅರುಣಕುಮಾರು ಸಿ ರವರು ಧ್ವಜಾರೋಹಣಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ರಾಷ್ಟ್ರದ ಅಭಿವೃದ್ದಿ ಸಾಧ್ಯ, ನಾವೆಲ್ಲರೂ ಒಂದು ಎನ್ನುವ ಭಾವನೆ ಎಲ್ಲರಲ್ಲೂ ಬೆಳಸಿಕೊಳ್ಳಬೇಕೆಂದು ತಿಳಿಸಿದರು. ಭಾರತ ದೇಶಕ್ಕೆ ಸ್ವಾತಂತ್ರ್ಯ ಬರಲು ಅನೇಕ ಹೋರಾಟಗಾರರು ತಮ್ಮ ಅಮೂಲ್ಯ ಜೀವನವನ್ನು ತ್ಯಾಗಮಾಡಿದ್ದಾರೆ, ಇವರನ್ನು ಎಂದಿಗೂ ಮರೆಯಬಾರದೆಂದರು. ವಿಶ್ವದಲ್ಲಿ ಭಾರತವು ಎಲ್ಲ ರಂಗಗಳಲ್ಲಿಯೂ ಮುಂಚುಣಿಯಲ್ಲಿ ಸಾಗುತ್ತಿದ್ದು ಇದಕ್ಕೆ ಎಲ್ಲರ ಕೊಡುಗೆಯು ಕಾರಣ, ಮತ್ತು ಇನ್ನು ಮುಂದೆಯೂ ಪ್ರತಿಯೊಬ್ಬರು ಭಾರತದ ಅಭಿವೃದ್ದಿಗಾಗಿ ಸಹಕರಿಸಬೇಕೆಂದರು. ಇಡೀ ವಿಶ್ವಕ್ಕೆ ಭಾರತ ದೇಶವು ಒಂದು ಮಾದರಿ ರಾಷ್ಟ್ರವಾಗಿದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಮ್ಹಾನ್ಸ್ ಸಂಸ್ಥೆಯು ರೋಗಿಗಳಿಗೆ ನೀಡುತ್ತಿರುವ ಗುಣಾತ್ಮಕ ಸೌಲಭ್ಯಗಳ ಬಗ್ಗೆ ಮಾತನಾಡಿ, ಡಿಮ್ಹಾನ್ಸ್ ಸಂಸ್ಥೆಯಿಂದ ಲಕ್ಷಾಂತರ ರೋಗಿಗಳು ಚಿಕಿತ್ಸೆ ಪಡೆದುಕೊಂಡಿದ್ದು ಈ ಸಂಸ್ಥೆಯು ಬಡವರ ಪಾಲಿಗೆ ಸಂಜೀವಿನಿಯಾಗಿದೆಯೆಂದರು. ಡಿಮ್ಹಾನ್ಸ್ ಸಂಸ್ಥೆಯಲ್ಲಿ ಆದ ಅಭಿವೃದ್ದಿ ಚಟುವಟಿಕೆಗಳ ಬಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಈ ಸಂಸ್ಥೆಯಲ್ಲಿ ಆದಂತಹ ಅಭಿವೃದ್ದಿಗಳ ಬಗ್ಗೆ ಮತ್ತು ಸಮುದಾಯ ಆಧಾರಿತ ಮಾನಸಿಕ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನು ಹೆಚ್ಚಿನ ನಿಟ್ಟಿನಲ್ಲಿ ಡಿಮ್ಹಾನ್ಸ್ ಸಂಸ್ಥೆಯ ಅಭಿವೃದ್ದಿಗೆ ಎಲ್ಲರ ಸಹಕಾರ ಅಗತ್ಯವೆಂದು ತಿಳಿಸಿದರು.

ಅಗಸ್ಟ್ 15, 2024 ರಂದು 78ನೇ ಸ್ವಾತಂತ್ರ್ಸೋವದ ದಿನಾಚರಣೆಯ ನಿಮಿತ್ತ ರೋಗಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ನರ್ಸಿಂಗ್ ಪ್ರಶಿಕ್ಷಾಣಾರ್ಥಿಗಳು ದೇಶ ಭಕ್ತಿಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಡಿಮ್ಹಾನ್ಸ್ ಸಂಸ್ಥೆಯ ವೈದ್ಯಕೀಯ ಅಧೀಕ್ಷರಾದ ಡಾ.ರಾಘವೇಂದ್ರ ನಾಯಕ್, ಸಹಾಯಕ ಆಡಳಿತಾಧಿಕಾರಿಗಳಾದ ವಿಜಯಲಕ್ಷ್ಮೀ ತೋರಗಲ್‍ಮಠ, ವೈದ್ಯಕೀಯ ಅಧಿಕ್ಷಕರಾದ ರವಿಕುಮಾರ ಉಪ್ಪಿನ್, ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ರಂಗನಾಥ ಕುಲಕರ್ಣಿ, ಸಹ ಪ್ರಾಧ್ಯಾಪಕರಾದ ಡಾ.ಆದಿತ್ಯ ಪಾಂಡುರಂಗಿ, ಡಾ.ಶ್ರೀನಿವಾಸ ಕೊಸಗಿ, ಡಾ.ಮಂಜುನಾಥ ಭಜಂತ್ರಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಸ್ವಪ್ನ ಪಾಂಡುರಂಗಿ, ಡಾ.ಮೇಘಮಾಲಾ ತಾವರಗಿ, ಇತರ ವಿಭಾಗದ ಭೋದಕ ಹಾಗೂ ಭೋಧಕೇತರ ಸಿಬ್ಬಂದಿಗಳು, ನರ್ಸಿಂಗ್ ಅಧಿಕಾರಿಗಳು, ಮನೋವೈದ್ಯಕೀಯ ಸಮಾಜಕಾರ್ಯಕರ್ತರು, ಕ್ಲಿನಿಕಲ್ ಸೈಕಾಲಜಿಸ್ಟಗಳು, ಸಂಸ್ಥೆಯ ಕಛೇರಿ ಸಿಬ್ಬಂದಿಗಳು, ಸೆಕ್ಯುರಿಟಿ ಭದ್ರತಾ ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ರೋಗಿಗಳ ಆರೈಕೆದಾರರು ಹಾಗೂ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *