Breaking News

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ.

ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಮೃತರು. ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *