ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಮ್ ಅವರು ಹುಬ್ಬಳ್ಳಿ ಧಾರವಾಡ ಬಸ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಹೆಚ್‌ಡಿಬಿಆರ್‌ಟಿಎಸ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಪ್ರಭಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ಈ ಹಿಂದೆ ಹೆಚ್‌ಡಿಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಾನಂದ ಭಜಂತ್ರಿ ಅವರು ರಾಯಚೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ ಆಗಿದ್ದಾರೆ. ತೆರವಾದ ಸ್ಥಾನಕ್ಕೆ ಪ್ರಿಯಾಂಗ ಎಮ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

