Breaking News

ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ : ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ನವಲಗುಂದ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೋಲ್ಕತ್ತದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.

25ಕ್ಕೂ ಹೆಚ್ಚು ತುರ್ತು ಚಿಕಿತ್ಸೆ ರೋಗಿಗಳಿಗೆ ಆಸ್ಪತ್ರೆಯಲ್ಲಿ ಶನಿವಾರ ಚಿಕಿತ್ಸೆ ಪಡೆದಿದ್ದಾರೆ ಇನ್ನೂ ಆಸ್ಪತ್ರೆ ಔಷದ ಅಂಗಡಿಯಲ್ಲಿ ಬಿಪಿ ಹಾಗೂ ಶುಗರ್ ಮಾತ್ರೆ ಪೂರೈಸುತ್ತಿದ್ದು ಖಂಡು ಬಂತು. ಇದಲ್ಲದೆ ನಗರದ ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಚಿಕಿತ್ಸೆ ಬಂದ ಮಾಡಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಧಾರವಾಡ ಜಿಲ್ಲಾ ಆಸ್ಪತ್ರೆ ಮುಂದೆ ನಡೆಯುವ ಪ್ರತಿಭಟನೆಗೆ ತೆರಳಿದ್ದರು.
ಈ ವೇಳೆ ಕೇಸರಿ ದೇಸಾಯಿ, ವಿಜಯಲಕ್ಷ್ಮಿ ಸುಲ್ತಾನಪುರ, ಶಿವಪ್ಪ ಧನಕ, ರೇಖಾ ಚೊಗರಿ, ಎಸ್‌.ಎನ್‌.ಸಿದ್ದಾರಾಮಶೆಟ್ಟರ, ಗಿರಿಜಾ ಪಾಟೀಲ, ಮಂಜುನಾಥ ಹಳ್ಳಿ ಮುಂತಾದವರು ಭಾಗವಹಿಸಿದ್ದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *