Breaking News

ಪುರೋಹಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಮುಂಬೈ: ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ.ಈ ಆಘಾತಕಾರಿ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಬ್ಬ ವ್ಯಕ್ತಿಯು ಚಾಕುವನ್ನು ಹಿಡಿದಿರುವುದು ಕಂಡುಬರುತ್ತದೆ, ಇತರರು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದಿರುವುದು ಕಂಡುಬರುತ್ತದೆ. ಆದರೆ, ದಾಳಿಯ ಹಿಂದಿನ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *