ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸುದ್ದಿಗೋಷ್ಠಿ ನಡೆಸಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ಆದರೂ ಬಿಜೆಪಿ ವಿನಾಕಾರಣ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷರಾದ ಬಸವರಾಜ ಗುರಿಕಾರ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅನುಮತಿ ನೀಡಿದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆನ್ನುವ ನಿಯಮ ಎಲ್ಲಿಯೂ ಇಲ್ಲ. ಸದ್ಯಕ್ಕೆ ಆ ಪ್ರಶ್ನೆ ಉದ್ಭವಿಸುವುದೂ ಇಲ್ಲ ಎಂದು ಕಾನೂನು ತಜ್ಞರೇ ಹೇಳಿದ್ದಾರೆ.ಆಡಳಿತರೂಢ ಕಾಂಗ್ರೆಸ್ ವಾದಿಸುವ ಪ್ರಕಾರ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಮುಖ್ಯಮಂತ್ರಿ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಬೇಕಾದರೆ, ಆ ಬಗ್ಗೆ ಯಾವುದಾದರೂ ಸಂಸ್ಥೆ ತನಿಖೆ ನಡೆಸಿ ಆರೋಪಿ ಪಟ್ಟಿ ಸಲ್ಲಿಸಬೇಕು. ಆದರೆ ಇಲ್ಲಿ ಅಂತಹ ಯಾವುದೇ ಪ್ರಸಂಗ ಎದುರಾಗಿಲ್ಲದಿರುವಾಗ ರಾಜ್ಯಪಾಲರು ಅನುಮತಿ ನೀಡಿರುವುದೇ ತಪ್ಪು. ಅವರು ಕಾನೂನು ಮೀರಿದ್ದಾರೆ ಎನ್ನುವುದಾಗಿದೆ. ಕಾಂಗ್ರೆಸ್‌ನ ಈ ಪ್ರಶ್ನೆಗಳಿಗೆ ಮೌನವಾಗಿಯೇ ಉತ್ತರ ನೀಡಿರುವ ರಾಜ್ಯಪಾಲರು, ಟಿ. ಜೆ.ಅಬ್ರಾಹಾಂ ಎಂಬುವವರ ಖಾಸಗಿ ದೂರನ್ನಾಧರಿಸಿ ವಿಚಾರಣೆಗೆ ಅನುಮತಿ ನೀಡಿದ್ದು ಸರಿಯಲ್ಲ ಎಂದಿದ್ದಾರೆ.
ಇಂತಗ ಅನೇಕ ಪ್ರಶ್ನೆಗಳ ಮಧ್ಯೆ, ರಾಜ್ಯ ಸರಕಾರ ತುರ್ತು ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರ ನಡೆ ವಿರುದ್ಧ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದೆ. ಅಂದರೆ ಈ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ನಡುವೆ ಅಥವಾ ರಾಜ್ಯ ಸರ್ಕಾರ ಮತ್ತು ರಾಜ ಭವನ ನಡುವೆ ನೇರ ಕಾನೂನು ಹೋರಾಟಕ್ಕೆ ಮಹೂರ್ಥ ನಿಗದಿಯಾದಂತಾಗಿದೆ. ಆದರೆ ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಬಸವರಾಜ ಗುರಿಕಾರ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

