Breaking News

ವೈದ್ಯರನ್ನು ಭೇಟಿ ಮಾಡಲು ಹೋದ ವ್ಯಕ್ತಿ ಹೃದಯಘಾತದಿಂದ ಸಾವು

ಇಂದೋ‌ರ್: ವೈದ್ಯರನ್ನು ಭೇಟಿ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಅಲ್ಲೇ ಸಾವನ್ನಪ್ಪಿದ್ದಾರೆ.

ಪರದೇಸಿಪುರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಈ ಘೋರ ದೃಶ್ಯ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೃತ ವ್ಯಕ್ತಿಯನ್ನು ಸೋನು ಎಂದು ಗುರುತಿಸಲಾಗಿದ್ದು, ಈತ ಆಟೋ ಚಾಲಕನಾಗಿದ್ದ ಎನ್ನಲಾಗಿದೆ. ಆಟೋ ಚಾಲಕ ಸೋನು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ರಾತ್ರಿ 8 ಗಂಟೆಗೆ ಚಿಕಿತ್ಸೆಗಾಗಿ ಭಾಗ್ಯಶ್ರೀ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರು ವೈದ್ಯರ ಚಿಕಿತ್ಸೆ ಪಡೆಯುತ್ತಿರುವಾಗಲೇ ಇದ್ದಕ್ಕಿದ್ದಂತೆ, ಕುಸಿದುಬಿದ್ದು ಸಾವನಪ್ಪಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *