ಹುಬ್ಬಳ್ಳಿ: 125ಕ್ಕೂ ಅಧಿಕ ವರ್ಷದ ಶಾಲೆಯನ್ನು ಏಕಾಏಕಿ ಕಿಡಗೇಡಿಗಳು ಧ್ವಂಸ ಮಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಏಕಾಏಕಿ ಶಾಲೆಯ ಕೊಠಡಿ ಧ್ವಂಸ ಮಾಡಿರುವ ಕಿಡಿಗೇಡಿಗಳು, ರಾತ್ರೋ ರಾತ್ರಿ ದುಷ್ಕರ್ಮಿಗಳು ಸರ್ಕಾರಿ ಶಾಲೆಯ ಮೇಲೆಯೇ ದುಷ್ಕೃತ್ಯ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶಾಸಕರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇತ್ತ ಶಾಲೆಯ ಉಳಿವಿಗಾಗಿ ಹೋರಾಟಕ್ಕೆ ಮುಂದಾದ ಸ್ಥಳೀಯ ನಿವಾಸಿಗಳು, ಶತಮಾನ ಕಂಡ ಶಾಲೆಯ ಉಳಿವಿಗಾಗಿ ನಿರಂತರ ಹೋರಾಡ ಕೈಗೊಳ್ಳುವುದಾಗಿ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಹಾಗೂ ಹಳೆಯ ವಿದ್ಯಾರ್ಥಿಗಳು, ಇದೀಗ ಶಾಲೆಯ ಕೊಠಡಿ ಧ್ವಂಸವಾದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕರ ಮುಂದೆಯೇ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

