ಹುಬ್ಬಳ್ಳಿ: ನಿನ್ನೆಯ ದಿನ ಶತಮಾನದ ಸರ್ಕಾರಿ ಶಾಲೆಯ ಕೊಠಡಿಯನ್ನು ಧ್ವಂಸ ಮಾಡಿರುವ ನಿಜಕ್ಕೂ ಖಂಡನೀಯವಾಗಿದೆ. ಸರ್ಕಾರಿ ಶಾಲೆಯನ್ನು ಒಡೆದು ದುಷ್ಕೃತ್ಯ ಮಾಡಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸುವುದು ಖಂಡಿತ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಶತಮಾನದ ಶಾಲೆಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಈಗಾಗಲೇ ಸಂಬಂಧಿಸಿದ ಇಲಾಖೆಗೆ ಮಾತನಾಡಿದ್ದೇನೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಯಾರೇ ಭಾಗಿಯಾಗಿದ್ದರೂ ಬಂಧಿಸುವ ಕಾರ್ಯವನ್ನು ಮಾಡಬೇಕು ಎಂದರು.
ಭೂಮಾಫಿಯಾ ಹೆಸರಲ್ಲಿ ಶಾಲೆಯ ಭೂಮಿಯನ್ನು ಹೊಡೆಯುವ ಕಾರ್ಯವನ್ನು ಮಾಡುತ್ತಿರುವುದು ನಿಜಕ್ಕೂ ಖಂಡನೀಯವಾಗಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಈ ಪ್ರಕರಣವನ್ನು ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುತ್ತೇವೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

