ಹುಬ್ಬಳ್ಳಿ: ಧಾರವಾಡ ಜಿಲ್ಲೆಯ
ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದ ಹೊರವಲಯದಲ್ಲಿ ರೈತರ ಜಮೀನಿನಲ್ಲಿ ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಬೋನ ಹಾಗೂ ಸಿ ಸಿ ಕ್ಯಾಮೆರಾ ಅಳವಡಿಸಲಾಗಿದೆ.
ಮಲಕನಕೊಪ್ಪ ಗ್ರಾಮ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಮೀನಿನಲ್ಲಿ ಮೊನ್ನೆ ಕಟ್ಟಿ ಹಾಕಿದ ನಾಯಿಯನ್ನು ಚಿರತೆಯೊಂದು ತಿಂದು ಹೋದ ಘಟನೆ ನಡೆದಿದ್ದು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜಮೀನಿನ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಶನಿವಾರ ರಾತ್ರಿ ಮತ್ತೆ ಚಿರತೆ ಹೆಜ್ಜೆಗಳು ಪತ್ತೆಯಾದ ಮಾಹಿತಿ ತಿಳಿದು ವಲಯ ಅರಣ್ಯ ಅಧಿಕಾರಿ ಅರುಣ್ ಕುಮಾರ್ ಅಷ್ಟಗಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಪರಿಶೀಲಿಸಿ ಬೋನಿನಲ್ಲಿ ನಾಯಿ ಹಾಕಿ ಅದರ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ.
ಘಟನೆ ನಡೆದ ದಿನದಿಂದ ರೈತರು ಗ್ರಾಮದ ಜನರು ಭಯಭೀತರಾಗಿದ್ದಾರೆ. ಅದಕ್ಕಾಗಿ ಗ್ರಾಮಸ್ಥರು ಜಮೀನಿಗೆ ತರುಳುವಾಗ ಎಚ್ಚರಿಕೆ ವಹಿಸಬೇಕು ಹಾಗೂ ಒಬ್ಬಂಟಿಯಾಗಿ ಯಾರು ಜಮೀನುಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ನೋಡಿದರೂ ಯಾವುದೇ ರೀತಿಯ ಚಿರತೆಯ ದೃಶ್ಯಗಳು ಸಿಕ್ಕಿಲ್ಲ. ಬೋನ ಬೇರೆ ಕಡೆ ಸ್ಥಳಾಂತರಿಸುವುದಾಗಿ ಮಾಹಿತಿ ನೀಡಿದ್ದಾರೆ. L
bigtvnews | Hubli Dharwad News | Kannada News | Karnataka News Hubli News | News In Hubli | Local news

