Breaking News

ಪಿಓಪಿ ಗಣಪತಿ ಮಾರಾಟ: ಮೂರ್ತಿಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹುಬ್ಬಳ್ಳಿ: ಪಿಓಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡಬಾರದೆಂಬ ಕಟ್ಟುನಿಟ್ಟಿನ ಆದೇಶ ಇದ್ದರೂ ಸಹ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪಾಲಿಕೆ ಅಧಿಕಾರಿಗಳು ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಾರ್ಡ್ ಸಂಖ್ಯೆ 80ರಲ್ಲಿ ಬರುವ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಗಣೇಶ ಕಾಲೋನಿ ನೇಕಾರನಗರ ಹುಬ್ಬಳ್ಳಿಯಲ್ಲಿ ಪಿಒಪಿ ಗಣಪತಿಗಳು ಇರುವ ಖಚಿತ ಮಾಹಿತಿಯ ಮೇರೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ದಾಳಿ ನಡೆಸಿ ಪಿಓಪಿ ಗಣಪತಿ ಮೂರ್ತಿಗಳು ಇರುವುದು ಖಚಿತಪಡಿಸಿಕೊಂಡು ವಶಕ್ಕೆ ಪಡೆದು ವ್ಯಾಪಾರ ಮಳಿಗೆಗಳಿಗೆ ಬೀಗ ಹಾಕಲಾಗಿದೆ.

ಇನ್ನೂ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಾಹಕ ಅಭಿಯಂತರರಾದ ಘನತ್ಯಾಜ್ಯ ವಸ್ತು ನಿರ್ವಹಣಾ ವಿಭಾಗದ ಮಲ್ಲಿಕಾರ್ಜುನ್, ವಲಯ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್, ಪರಿಸರ ಅಭಿಯಂತರರಾದ ಯುವರಾಜ್, ಆರೋಗ್ಯ ನಿರೀಕ್ಷಕರಾದ ದೀಪಿಕಾ, ಭಜಂತ್ರಿ, ಮಂಜುನಾಥ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *