Breaking News

ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ: ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿನೋರ್ವ ಮೃತಪಟ್ಟ ದಾರುಣ ಘಟನೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ.

ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಮಣಿಪಾಲ .໖໐.2 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜನಿತ್ ಕೊನೆಯುಸಿರೆಳೆದಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *