Breaking News

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ವರದಿಯ ಬುಲೆಟಿನ್‌ನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

5 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಹಲವೆಡೆ ಮಳೆ ಸುರಿದಿದೆ.ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ. ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಮರಗಳ ಕೆಳಗೆ, ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಐಎಂಡಿ ಸೂಚಿಸಿದೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *