Breaking News

ಅವಳಿ ನಗರಕ್ಕೆ ಮತ್ತೊಂದು ಗೌರವದ ಗರಿ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಈಗ ಮತ್ತೊಂದು ಗೌರವದ ಗರಿ ಮುಡಿಗೇರಿದೆ.

ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆ ಅಡಿ ಉತ್ತಮ ಸಾಧನೆಗಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಒಟ್ಟು ಮೂರು ಪ್ರಶಸ್ತಿಗಳು ಲಭಿಸಿದೆ.ಬೀದಿ ಬದಿ ವ್ಯಾಪಾರಸ್ಥರಿಗೆ ಆತ್ಮನಿರ್ಭರ ನಿಧಿ ಯೋಜನೆಯಲ್ಲಿ ಪಾಲಿಕೆಯು ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಹೌದು.. ಸಚಿವ ಡಾ: ಶರಣಪ್ರಕಾಶ್ ರುದ್ರಪ್ಪ ಪಾಟೀಲ್‌ ಅಧ್ಯಕ್ಷತೆಯಲ್ಲಿ ನಡೆದೆ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ್ ಉಳ್ಳಾಗಡ್ಡಿ ಅವರು ಪ್ರಶಸ್ತಿ ಪಡೆದಿರುವುದಿ ನಿಜಕ್ಕೂ ವಿಶೇಷವಾಗಿದೆ.

ಇನ್ನೂ ಪಾಲಿಕೆಯು ಈ ಹಿಂದೆ ಸಾಕಷ್ಟು ಕಾರ್ಯಸಾಧನೆ ಮೂಲಕ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಈಗ ಆತ್ಮ ನಿರ್ಭರ ನಿಧಿ ಯೋಜನೆ ಅಡಿಯಲ್ಲಿ ಇಂತಹದೊಂದು ಸಾಧನೆ ಮಾಡಿ ಈಗ ಮೂರು ಪ್ರಶಸ್ತಿಗಳನ್ನು ಪಡೆದಿರುವುದು ಹುಬ್ಬಳ್ಳಿ ಧಾರವಾಡ ಅವಳಿನಗರಕ್ಕೆ ಬಂದಿರುವ ಗೌರವವಾಗಿದೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *