Breaking News

ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್ ಚಾಲಕ ಅತ್ಯಾಚಾರ

ಚಂಡೀಗಢ: ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್ ಚಾಲಕನೊಬ್ಬ ತಿಂಗಳುಗಟ್ಟಲೆ ಅತ್ಯಾಚಾರವೆಸಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಚಂಡೀಗಢದ ಮಣಿಮಜ್ರಾದ 26 ವರ್ಷದ ಬಸ್ ಚಾಲಕ ಮೊಹಮ್ಮದ್ ರಝಾಕ್ ಎಂದು ಗುರುತಿಸಲಾಗಿದೆ. ಮಾರ್ಫ್ ಮಾಡಿದ ಚಿತ್ರ ಬಳಸಿ ಆಕೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಮೇ ಹಾಗೂ ಜೂನ್ ನಡುವೆ ಇವೆಲ್ಲವೂ ಆಕೆಯ ಮನೆಯಲ್ಲೇ ನಡೆದಿದೆ ಎನ್ನಲಾಗಿದೆ. ರಝಾಕ್ ತನ್ನನ್ನು ಹಿಂಬಾಲಿಸುತ್ತಿದ್ದ ಮೊದಲು ಸ್ನೇಹ ಸಂಪಾದಿಸಲು ಪ್ರಯತ್ನಿಸುತ್ತಿದ್ದ, ಆದರೆ ಆಕೆ ನಿರಾಕರಿಸಿದಾಗ ಆಕೆಯ ಚಿತ್ರಗಳನ್ನು ಮಾರ್ಫ್ ಮಾಡಿ ಬೆದರಿಕೆ ಹಾಕಲು ಶುರು ಮಾಡಿದ್ದಾನೆ.

ಮೇ 18ರಂದು ಬಾಲಕಿ ಹಾಗೂ ಆಕೆಯ ಸಹೋದರಿ ಮನೆಯಲ್ಲಿದ್ದು, ಪೋಷಕರು ಕೆಲಸಕ್ಕೆ ಹೋಗಿದ್ದರು. ರಝಾಕ್ ಅವರ ಮನೆಗೆ ಬಂದಿದ್ದನು. ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ, ಒಪ್ಪದಿದ್ದರೆ ಆ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಹೇಳಿದ್ದಾನೆ. ಹೀಗೆ ಬೆದರಿಕೆ ಹಾಕಿ ಜುಲೈ 6 ಹಾಗೂ ಜುಲೈ 26ರಂದು ಮತ್ತೆರಡು ಬಾರಿ ಮನೆಗೆ ಬಂದು ಅತ್ಯಾಚಾರವೆಸಗಿದ್ದಾನೆ. ಬಳಿಕ ಈ ವಿಚಾರ ಪೋಷಕರಿಗೆ ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದೆ.

ವರದಿಗಳ ಪ್ರಕಾರ, ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಶಾಲಾ ಚಾಲಕನಿಂದ ಶಾಲಾ ಅಧಿಕಾರಿಗಳು ರಾಜೀನಾಮೆ ಕೇಳಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್‌) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಜಿರಕ್‌ಪುರ ಪೊಲೀಸರು ತಕ್ಷಣ ಬಂಧಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *