Breaking News

ಲಾರಿಗೆ ಡಿಕ್ಕಿ ಹೊಡೆದ ಕಾರು: ಮಗು ಸೇರಿ‌ಮೂವರ ಸಾವು

ಹುಬ್ಬಳ್ಳಿ : ಓಮಿನಿ ಕಾರಿನ ಟೈಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ.

ಮೃತರು ಕೊಪ್ಪಳ ತಾಲೂಕಿನ ಮಂಗಳಾಪೂರ ಗ್ರಾಮದ ನಿವಾಸಿಗಳಾಗಿದ್ದಾರೆ. ಒಂದೇ‌ ಕುಟುಂಬದವರಾಗಿದ್ದಾರೆ. ಮೃತರನ್ನು ಜಾಫರಸಾಬ ಮಂಗಳೂರು (60) ಮುಸ್ತಫಾ (ಸಾಹೇಬ) ಮಂಗಳೂರು (36) ಶೊಹೇಬ್ ಮಂಗಳೂರು (06) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಎಸ್‌ಡಿಎಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *