Breaking News

ವಿಶೇಷ ವಿಕಲಚೇತನರಿಗೆ ಸಲಕರಣೆ ವಿತರಣೆ ಕಾರ್ಯಕ್ರಮ

ಕುಂದಗೋಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮತ್ತು ಜವಮಂಗಳ ಕಾರ್ಯಕ್ರಮದ ಮೂಲಕ ವಿಶೇಷ ವಿಕಲಚೇತನರಿಗೆ ಸಲಕರಣೆ ವಿತರಣೆ ಕಾರ್ಯಕ್ರಮ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ನಡೆಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ ವಹಿಸಿದ್ದರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಾನಂದ ಬೆಂತೂರ ನೇತೃತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವೇತನ ಮಂಜೂರಾತಿ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸಂಘದ ಪ್ರಾದೇಶಿಕ ನಿರ್ದೇಶಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಘದ ಅಧಿಕಾರಿಗಳು ಸೇರಿದಂತೆ ಅರ್ಹ ವಿದ್ಯಾರ್ಥಿಗಳು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *