Breaking News

ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ : ಡಾ.ಜಿ.ಪರಮೇಶ್ವರ

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ. ಆದ್ದರಿಂದಲೇ 11 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸ್ಪಷ್ಟಿಕರಣ ಕೇಳಿ ಒಂದೆರಡು ಮಸೂದೆಗಳನ್ನು ವಾಪಸ್ ಕಳುಹಿಸುತ್ತಿದ್ದರು. ಆದರೆ, ಈವರೆಗೆ ಸಾರಸಗಟಾಗಿ ಇಷ್ಟೊಂದು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಉದಾಹರಣೆಗಳಿರಲಿಲ್ಲ. 11 ಬಿಲ್‌ಗಳನ್ನು ವಾಪಸ್ ಕಳಿಸಿರುವುದು ನೋಡಿದರೆ, ರಾಜ್ಯಪಾಲರಿಗೆ ನಮ್ಮ ಸರ್ಕಾರದ ಮೇಲೆ ವಿಶ್ವಾಸದ ಕೊರತೆ ಆಗಿದೆಯೆಂಬ ಸಂದೇಶ ಸಿಗುತ್ತಿದೆ ಎಂದರು.

ಬೇರೆ ರಾಜ್ಯಗಳ ರಾಜ್ಯಪಾಲರ ನಡತೆ ಮತ್ತು ವರ್ತನೆ ಬಗ್ಗೆ ಪ್ರಶ್ನೆಗಳು ಬಂದಿವೆ. ಈ ಬಗ್ಗೆ ಇಂಡಿಯಾ ಒಕ್ಕೂಟ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಗೊತ್ತಿಲ್ಲ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ ರಾಜ್ಯಪಾಲರ ನಡತೆ, ವರ್ತನೆ ಕುರಿತು ಧ್ವನಿ ಎದ್ದಿವೆ. ಈ ಬಗ್ಗೆ ಚರ್ಚೆ ಆಗುತ್ತದೆಯೇ ಏನೆಂಬುದು ಮಾಹಿತಿ ಇಲ್ಲ ಎಂದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *