Breaking News

ಚರಂಡಿ ನೀರಿಗೆ ಬಿದ್ದು ಬಾಲಕ ಸಾವು

ಬಳ್ಳಾರಿ: ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ.

ವಿರಾಟ್.ಜೆ (4) ಮೃತ ಬಾಲಕ. ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸುದ್ದಿ ತಿಳಿದು ಹೊಸಪೇಟೆ ಶಾಸಕ ಹೆಚ್‌ಆರ್ ಗವಿಯಪ್ಪ ಆಸ್ಪತ್ರೆಗೆ ದೌಡಾಯಿಸಿ ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಟ್ಟಣದಲ್ಲಿ ಚರಂಡಿ ನೀರು ನಿಂತಿರೋ ಪ್ರದೇಶಗಳನ್ನು ಕೂಡಲೇ ಸ್ವಚ್ಛಗೊಳಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *