Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆ.

ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆ.

ಮಂಡ್ಯ : ಇಲ್ಲಿನ ಸುಭಾಷ್ ನಗರದಲ್ಲಿ ನಡೆದ ತಾಲೂಕು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು.
ಕೋಮುವಾಧಿ ಬಿಜೆಪಿ ಪಕ್ಷದ ವಿರುದ್ಧ ಸಂಘಟಿತ ಹೋರಾಟ ನಡೆಸಿ ಜನಜಾಗೃತಿ ಮೂಡಿಸಲು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾಶ್ರೀಕಾಂತ್ ಮನವಿ ಮಾಡಿದರು. ಸಿದ್ಧರಾಮಯ್ಯನವರು ನಾಡಿನ ಮುಖ್ಯಮಂತ್ರಿಗಳಾಗಿದ್ದಾಗ ಅನುಷ್ಠಾನಗೊಳಿಸಿದ ಜನಪರವಾದ ಕಾರ್ಯಕ್ರಮಗಳು, ಅನ್ನಭಾಗ್ಯ, ರೈತರ ಬೆಳೆಸಾಲ ಮನ್ನಾ ಯೋಜನೆ ಸೇರಿದಂತೆ ವಿವಿಧ ಜನೋಪಯೋಗಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಹೇಳಿ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ಮೂಡುವಂತೆ ಮಾಡಬೇಕು. ಆಪರೇಷನ್ ಕಮಲ ನಡೆಸಿ ಶಾಸಕರನ್ನು ಖರೀದಿಸಿ ಅಡ್ಡದಾರಿಯ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಪಣತೊಡಬೇಕು ಎಂದು ಅಂಜನಾಶ್ರೀಕಾಂತ್ ಕರೆ ನೀಡಿದರು.ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಮಹಿಳೆಯರು ಹೋರಾಟಕ್ಕೆ ನಿಂತರೆ ಯಾವುದೇ ಕೆಲಸವನ್ನು ಮಾಡಿ ಮುಗಿಸದೇ ವಿರಮಿಸುವುದಿಲ್ಲ. ದೇಶದ ಸಮಗ್ರವಾದ ಅಭಿವೃದ್ಧಿಗಾಗಿ ಮತ್ತೊಮ್ಮೆ ದೇಶ ಹಾಗೂ ರಾಜ್ಯದ ಆಡಳಿತದ ಚುಕ್ಕಾಣಿಯನ್ನು ಕಾಂಗ್ರೆಸ್ ಹಿಡಿಯುವುದು ಅನಿವಾರ್ಯವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆದಿಹಳ್ಳಿ ಮೀನಾಕ್ಷಿ ಅವರಿಗೆ ಆದೇಶ ಪತ್ರವನ್ನು ವಿತರಿಸಿದರು.
ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಜಯಲಕ್ಷ್ಮಿ ರಾಜಶೇಖರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮಂಡ್ಯ ನಗರಸಭೆಯ ಮಾಜಿಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿಅಧ್ಯಕ್ಷೆ ಶುಭದಾಯಿನಿ, ತಾಲೂಕು ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ರವೀಂದ್ರಬಾಬು, ಪುರಸಭೆಯ ಸದಸ್ಯರಾದ ಪಂಕಜಾ, ಕಲ್ಪನಾ, ಸುಗುಣರಮೇಶ್, ಪುಟ್ಟಗೌರಮ್ಮ, ಸೌಭಾಗ್ಯ, ಡಿ.ಪ್ರೇಮಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ರಾಜಶೇಖರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ರಾಮಕೃಷ್ಣೇಗೌಡ ಮತ್ತಿತರರು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!