Hiring Reporter’s For more Information Contact Above Number 876 225 4007 . Program producer
Home / Breaking News / ಅಣ್ಣಾಮಲೈ ರಾಜಕೀಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿದ್ದಾರೆ : ಲಕ್ಷ್ಮಣ ಸವದಿ

ಅಣ್ಣಾಮಲೈ ರಾಜಕೀಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿದ್ದಾರೆ : ಲಕ್ಷ್ಮಣ ಸವದಿ

Spread the love

ಬೆಳಗಾವಿ : ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಅಣ್ಣಾಮಲೈ ಅವರು ರಾಜಕೀಯ ಕ್ಷೇತ್ರದಲ್ಲಿ ಕೂಡ ಯಶಸ್ಸು ಕಾಣಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅಣ್ಣಾಮಲೈ ಒಳ್ಳೆಯ ಅಧಿಕಾರಿಯಾಗಿದ್ದರು. ಅಣ್ಣಾಮಲೈ ಅವರನ್ನು ಬಹಳ ಸಮೀಪದಿಂದ ನೋಡಿದ್ದೇನೆ. ಅವರಿಗೆ ಸಮಾಜ ಸೇವೆ ಮಾಡುವ ಅಭಿಲಾಷೆ ಇತ್ತು.

ಈ ಕಾರಣಕ್ಕೆ ಒಳ್ಳೆಯ ‌ಅಧಿಕಾರಿ ಎಂಬ ಹೆಸರು ಮಾಡಿದ್ದರೂ ಅಣ್ಣಾಮಲೈ ಇಲಾಖೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಪಕ್ಷ ಅಣ್ಣಾಮಲೈಗೆ ತಮಿಳುನಾಡಿನ ಉಸ್ತುವಾರಿವಹಿಸಿದೆ. ರಾಜಕೀಯ ಕ್ಷೇತ್ರದಲ್ಲಿ ಕೂಡ ಅಣ್ಣಾಮಲೈ ಯಶಸ್ಸು ಕಾಣಲೆಂದು ಶುಭ ಹಾರೈಸುತ್ತೇನೆ ಎಂದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!