Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಜೈಲಿನಿಂದ ಬಾಹರ್ ಬಂದ ಟ್ರಬಲ್ ಶೂಟರ್ ಡಿಕೆಶಿಗೆ ಮತ್ತೊಂದು ಟ್ರಬಲ್ ಭೀತಿ.

ಜೈಲಿನಿಂದ ಬಾಹರ್ ಬಂದ ಟ್ರಬಲ್ ಶೂಟರ್ ಡಿಕೆಶಿಗೆ ಮತ್ತೊಂದು ಟ್ರಬಲ್ ಭೀತಿ.

ಕರ್ನಾಟಕ: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.
ಹೈಕೋರ್ಟ್ ನಿಂದ ನವೆಂಬರ್ 30 ರೊಳಗೆ ಯು.ವಿ. ಸಿಂಗ್ ನೀಡಿದ ವರದಿ ಅನುಷ್ಠಾನ ಕುರಿತಾಗಿ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. ರಾಜ್ಯ ಸರ್ಕಾರ ಹೈಕೋರ್ಟ್ ನಿರ್ದೇಶನದಂತೆ ಆಕ್ಷೇಪಣೆ ಇಲ್ಲವೇ ಉತ್ತರವನ್ನು ಸಲ್ಲಿಸಬೇಕಿದೆ.
ಇನ್ನು ಸರ್ಕಾರ ಸೂಕ್ತ ನಿರ್ಧಾರ ತಿಳಿಸದಿದ್ದರೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ದೂರುದಾರರಾದ ಸಾಮಾಜಿಕ ಹೋರಾಟಗಾರ ಎ.ಸಿ. ಶಿವರಾಜ್ ಹಾಗೂ ರೈತ ಮುಖಂಡ ಬಿ.ಸಿ. ನಾರಾಯಣಸ್ವಾಮಿ ಒತ್ತಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿಂದೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಾಮನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಕುರಿತ ತನಿಖೆಗೆ ಐಎಫ್‌ಎಸ್ ಅಧಿಕಾರಿ ಯು.ವಿ. ಸಿಂಗ್ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು.
ಈ ಸಮಿತಿ ಲೋಕಾಯುಕ್ತಕ್ಕೆ ವರದಿ ನೀಡಿದ್ದು ಡಿ.ಕೆ. ಶಿವಕುಮಾರ್ ಕುಟುಂಬದ ಸದಸ್ಯರ ಒಡೆತನದ ಕಂಪನಿಗಳು ಅಕ್ರಮ ಗಣಿಗಾರಿಕೆ ನಡೆಸಿರುವ ಬಗ್ಗೆ ಹೇಳಲಾಗಿತ್ತು.
ಯು.ವಿ. ಸಿಂಗ್ ವರದಿ ಅನುಷ್ಠಾನಕ್ಕೆ ನಂತರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಆಸಕ್ತಿ ತೋರದ ಹಿನ್ನೆಲೆಯಲ್ಲಿ ವರದಿ ಅನುಷ್ಠಾನಕ್ಕೆ ಕೋರಿ ಎ.ಸಿ. ಶಿವರಾಜ್ ಮತ್ತು ಬಿ.ಸಿ. ನಾರಾಯಣಸ್ವಾಮಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಯು.ವಿ. ಸಿಂಗ್ ವರದಿ ಅನುಷ್ಠಾನ ಕುರಿತಾಗಿ ನವಂಬರ್ 30ರೊಳಗೆ ವರದಿ ನೀಡುವಂತೆ ಸೂಚನೆ ನೀಡಿದೆ. ನ್ಯಾಯಾಲಯಕ್ಕೆ ವರದಿ ಅನುಷ್ಠಾನದ ಮಾಹಿತಿ ನೀಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಡಿಕೆಶಿ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಯೋಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!