Hiring Reporter’s For more Information Contact Above Number 876 225 4007 . Program producer
Home / Breaking News / ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

Spread the love

ಬೆಂಗಳೂರು : ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಿಂದ 2020ರ ಆಗಸ್ಟ್ 5ರಿಂದ 14ರವರೆಗೆ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿಪಿಎಲ್ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಸಮಯದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳಾದ ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ, ಅಕೌಂಟ್ ಪಾಸ್ ಬುಕ್ ತಲಾ 4 ಪ್ರತಿ ಹಾಗೂ 5 ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ 2020ರ ಆಗಸ್ಟ್ 3ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಸಂದರ್ಶನ ದಿನಾಂಕ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9243602888 ಮತ್ತು 9886781239ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Check Also

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

Spread the loveಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!