Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹಿಂದೂಗಳಿಗೆ ಅಯೋಧ್ಯೆ: ಐತಿಹಾಸಿಕ ತೀರ್ಪು ಪ್ರಕಟ.

ಹಿಂದೂಗಳಿಗೆ ಅಯೋಧ್ಯೆ: ಐತಿಹಾಸಿಕ ತೀರ್ಪು ಪ್ರಕಟ.

ನವದೆಹಲಿ: ವಿವಾದಿತ ರಾಮಜನ್ಮಭೂಮಿ ಪ್ರಕರಣದ ವಿವಾದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ಪ್ರಕಟ ಮಾಡಿದೆ. ಎಲ್ಲಾ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್​ನ ಸಾಂವಿಧಾನಿಕ ಪೀಠ, ಕೇವಲ ನಂಬಿಕೆಗಳಿಂದ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಜತೆಗೆ ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಇನ್ನು ಮುಸ್ಲಿಂ ಸಮುದಾಯಕ್ಕೆ ಬದಲಿ ಜಾಗವನ್ನು ನೀಡಲು ಸಹ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಈ ಮೂಲಕ ಅತಿ ಹಳೆಯ ವಿವಾದಕ್ಕೆ ತೆರೆ ಎಳೆದಿದೆ.
ಇದೇ ತಿಂಗಳ 17ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ನವೆಂಬರ್​ 17ರಂದು ತೀರ್ಪು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಿದೆ

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!