Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಯೋಧ್ಯ ತೀರ್ಪು ಹಿನ್ನೆಲೆ: ನಾಳೆ ಶಾಲೆ, ಕಾಲೇಜು‌ ರಜೆ.

ಅಯೋಧ್ಯ ತೀರ್ಪು ಹಿನ್ನೆಲೆ: ನಾಳೆ ಶಾಲೆ, ಕಾಲೇಜು‌ ರಜೆ.

 

ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ನಲ್ಲಿ ನವೆಂಬರ್ 9 ರಂದು ಬೆಳಗ್ಗೆ 10.30 ಕ್ಕೆ  ಅಯೋಧ್ಯೆ ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ದೇಶದ್ಯಾಂತ ತೀವ್ರ ಪೊಲೀಸ್ ಕಟ್ಟಚರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ ರಾಜ್ಯದ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದೇಶದ ಸರ್ವೋನ್ನತ ನ್ಯಾಯಾಲಯವು ಅಯೋಧ್ಯೆ ಜಾಗೆ ಕುರಿತು ತನ್ನ ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನೂ ದೇಶದ್ಯಾಂತ ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ. ಶನಿವಾರ ಬೆಳಿಗ್ಗೆಯಿಂದ ಪೊಲೀಸ್ ಭದ್ರತೆ ಕೈ ಗೊಳ್ಳಲಾಗಿದ್ದು,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಡಿಯೋ ಚಿತ್ರೀಕರಣ ವ್ಯವಸ್ಥೆ,ಕೆಲ ಪ್ರದೇಶಗಳಲ್ಲಿ ವಿಶೇಷ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜನಸಂದಣಿ ಪ್ರದೇಶಗಳಲ್ಲಿ ವ್ಯಾಪಕ ಭದ್ರತೆಗೆ ಆದ್ಯತೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪರ ಅಥವಾ ವಿರೋಧವಾಗಿ ಯಾರೊಬ್ಬರೂ ಸಂಭ್ರಮಾಚರಣೆ, ಪ್ರತಿಭಟನೆ ಮಾಡದಂತೆ ಮನವಿ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಮೂಡಿಸುವ ಅಥವಾ ವದಂತಿಗಳನ್ನು ಸೃಷ್ಟಿಸದಂತೆ ಎಚ್ಚರಿಕೆ ವಹಿಸಲಾಗಿದೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!