Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಬಗಡಗೇರಿ ಗ್ರಾಮಸ್ಥರಿಂದ ಶಾಸಕರಿಗೆ ತರಾಟೆ: ವೀಡಿಯೋ ವೈರಲ್.

ಬಗಡಗೇರಿ ಗ್ರಾಮಸ್ಥರಿಂದ ಶಾಸಕರಿಗೆ ತರಾಟೆ: ವೀಡಿಯೋ ವೈರಲ್.

 

ಹುಬ್ಬಳ್ಳಿ: ಶಾಸಕರಿಗೆ ಗ್ರಾಮಸ್ಥರೆಲ್ಲಾ ಸೇರಿಕೊಂಡು ಹಿಗ್ಗಾ ಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ಕಲಘಟಗಿ ವಿಧಾನ ಸಭಾ ಕ್ಷೇತ್ರದ ಬಗಡಗೇರಿ ಗ್ರಾಮದಲ್ಲಿ ನಡೆದಿದೆ.
ಇನ್ನೂ ಕಲಘಟಗಿ ಶಾಸಕ ಸಿ.ಎಮ್.ನಿಂಗಬ್ಬವರ ಅವರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ಚುನಾವಣೆ ವೇಳೆಯಲ್ಲಿ ನೀಡಿದ ಭರವಸೆಗಳನ್ನು ಈವರೆಗೆ ಈಡೇರಿಸಿಲ್ಲಾ, ಅಲ್ಲದೇ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದಲ್ಲದೇ, ತಮಗೆ ಬೇಕಾದವರಿಗೆ ಮಾತ್ರ ಅನುದಾನ ನೀಡಲಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಕೂಡಲೇ ತಾರತಮ್ಯ ಮಾಡದೇ ಸರಿಯಾದ ರೀತಿಯಲ್ಲಿ ಯೋಜನೆಗಳನ್ನು ಕಲ್ಪಿಸಬೇಕು. ಅಲ್ಲದೇ ಚುನಾವಣೆ ವೇಳೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಇನ್ನೂ ಗ್ರಾಮಸ್ಥರೆಲ್ಲಾ ತರಾಟೆಗೆ ತೆಗೆದುಕೊಂಡ ಹಿನ್ನಲೆಯಲ್ಲಿ ಶಾಸಕ ಸಿ.ಎಮ್.ನಿಂಬಣ್ಣವರ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತರು. ಇನ್ನೂ ಈ ಎಲ್ಲ ದೃಶ್ಯಗಳು ಸ್ಥಳೀಯರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಅಲ್ಲದೇ ಈ ಹಿಂದೆ ಕ್ಯಾರಕೊಪ್ಪ ಗ್ರಾಮದಲ್ಲೂ ಶಾಸಕರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದನು ಇಲ್ಲಿ ಸ್ಮರಸಬಹುದು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!