Hiring Reporter’s For more Information Contact Above Number 876 225 4007 . Program producer
Home / Breaking News / ಎಸ್.ಎಲ್. ಭೈರಪ್ಪ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿ.

ಎಸ್.ಎಲ್. ಭೈರಪ್ಪ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿ.

Spread the love

ಧಾರವಾಡ: ವರಕವಿ ಡಾ. ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿಂದ ಕೊಡಮಾಡುವ 2019-20ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ, ಈ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ಜ. 31ರಂದು ಸಂಜೆ ಐದು ಗಂಟೆಗೆ ಬೇಂದ್ರೆ ಭವನದಲ್ಲಿ ಪ್ರದಾನ ಮಾಡಲಾಗುವುದು.ಸಾಹಿತಿ ಡಾ. ಗುರುಲಿಂಗ ಕಾಪಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ.‌ತೇಜಸ್ವಿ ಕಟ್ಟಿಮನಿ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದರು.ಈ ಪ್ರಶಸ್ತಿ ಒಂದು ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ. ಬೇಂದ್ರೆ ಟ್ರಸ್ಟ್ ಪ್ರಾರಂಭದಲ್ಲಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸೇರಿ ನೀಡಿದ್ದ ಇಡಿಗಂಟನ್ನು ಠೇವಣಿ ಇಡಲಾಗಿತ್ತು.ಅದರಿಂದ ಬಂದ 90 ಸಾವಿರ ಹಾಗೂ ಸರ್ಕಾರ ನೀಡಿದ ಹತ್ತು ಸಾವಿರ ರೂ.‌ಸೇರಿ ಒಟ್ಟು ಒಂದು ಲಕ್ಷ ರೂ. ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!