Breaking News
Hiring Reporter’s For more Information Contact Above Number 876 225 4007 . Program producer
Home / Breaking News / ನಿರ್ಮಾಣ ಭಾರತೀಯ ಜನತಾ ಪಕ್ಷದ ವಾಗ್ದಾನ ಪ್ರಣಾಳಿಕೆ ಬಿಡುಗಡೆ.

ನಿರ್ಮಾಣ ಭಾರತೀಯ ಜನತಾ ಪಕ್ಷದ ವಾಗ್ದಾನ ಪ್ರಣಾಳಿಕೆ ಬಿಡುಗಡೆ.

ಮಂಡ್ಯ: ನಿರ್ಮಾಣ ಭಾರತೀಯ ಜನತಾ ಪಕ್ಷದ ವಾಗ್ದಾನ ಪ್ರಣಾಳಿಕೆಯನ್ನು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥನಾರಾಯಣಗೌಡ ಮತ್ತು ರಾಜ್ಯ ಬಿಜೆಪಿ ಯುವಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿಯೇ ಕೃಷ್ಣರಾಜಪೇಟೆ ಅಭಿವೃದ್ಧಿ ಕೆಲಸ ಕಾರ್ಯಗಳಿಂದ ವಂಚಿತವಾಗಿದೆ. ಗ್ರಾಮೀಣ ಪ್ರದೇಶದ ರಸ್ತೆಗಳು ಶೇ.80ರಷ್ಟು ಹಾಳಾಗಿದೆ. ಸಂತೇಬಾಚಹಳ್ಳಿ ಮತ್ತು ಶೀಳನೆರೆ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಎರಡೂ ಹೋಬಳಿಗಳಿಗೆ ಏತನೀರಾವರಿ ಮೂಲಕ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು..ನಿರುದ್ಯೋಗ ಸಮಸ್ಯೆಯನ್ನು ದೂರ ಮಾಡಲು
ಕೌಶಲ್ಯಾಧಾರಿತ ಕಾರ್ಯಕ್ರಮ ಅನುಷ್ಠಾನಗೊಳಿಸಿ ಯುವಜನರಿಗೆ ಉದ್ಯೋಗ ಆಧಾರಿತ ತರಬೇತಿ ಕೊಡಿಸಲಾಗುವುದು.
ತಾಲ್ಲೂಕಿನಲ್ಲಿ ಶಿಕ್ಷಣ, ವಿದ್ಯುತ್, ಆರೋಗ್ಯ ಮತ್ತು ನೀರಾವರಿ ಇಲಾಖೆಯ ಕೆಲಸಗಳಿಗೆ ಒತ್ತು ನೀಡಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಪ್ರಾತಿನಿಧ್ಯವು ಇಲ್ಲದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ
ಬಿಜೆಪಿ ಅಭ್ಯರ್ಥಿ ನಾರಾಯಣಗೌಡರನ್ನು ಗೆಲ್ಲಿಸಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ರಾಜಕೀಯ ಸ್ಥಾನಮಾನ ನೀಡಲಾಗುವುದು ಎಂದು ವಿವರಿಸಿದರು.
ಅಶ್ವತ್ಥನಾರಾಯಣ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವದ ಅಡಿಯಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಕೆಲಸ ಮಾಡುತ್ತಿದೆ.
ಯಡಿಯೂರಪ್ಪ ಅವರ ಕೈಬಲಪಡಿಸಲು ರಾಜ್ಯಸರ್ಕಾರಕ್ಕೆ ಶಕ್ತಿಯನ್ನು ತುಂಬಲು ಕ್ಷೇತ್ರದ ಜನತೆ ಅಭಿವೃದ್ಧಿಗೆ ಪೂರಕವಾಗಿ ಮತ ಚಲಾಯಿಸಿ
ನಾರಾಯಣಗೌಡರನ್ನು ಭಾರೀ ಬಹುಮತಗಳ ಅಂತರದಿಂದ ಗೆಲ್ಲಿಸಿ ಇತಿಹಾಸ ನಿರ್ಮಾಣ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿ.ವೈ.ವಿಜಯೇಂದ್ರ ಕೆ.ಆರ್.ಪೇಟೆ ತಾಲ್ಲೂಕಿನ ಪ್ರಬುದ್ಧ ಮತದಾರರು ಬದಲಾವಣೆ ಬಯಸಿದ್ದಾರೆ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ರಾಜ್ಯದಲ್ಲಿ ಉಪ ಚುನಾವಣೆಯು ನಡೆಯುತ್ತಿರುವ ಎಲ್ಲಾ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ.
ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವು ಮೂರೂವರೆ ವರ್ಷಗಳ ಕಾಲ ದಕ್ಷ ಪ್ರಾಮಾಣಿಕ ಆಡಳಿತ ನೀಡಲಿದೆ.
ಬಿಜೆಪಿ ಸರ್ಕಾರವನ್ನು ಬೀಳಿಸುವ ಜೆಡಿಎಸ್ ಕಾಂಗ್ರೆಸ್ ಪಕ್ಷಗಳ ಕನಸು ನನಸಾಗುವುದಿಲ್ಲ.
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ದಿಗ್ವಿಜಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ಕ್ಷೇತ್ರದ ಪ್ರಬುದ್ಧ ಮತದಾರರು ಅಪಪ್ರಚಾರಗಳಿಗೆ ಕಿವಿಗೊಡದೇ ಅಭಿವೃದ್ಧಿಯ ಪರವಾಗಿರುವ
ನಾರಾಯಣಗೌಡರನ್ನು ಗೆಲ್ಲಿಸಿ ಮುಖ್ಯಮಂತ್ರಿಗಳಿಗೆ ತವರಿನ ಉಡುಗೊರೆಯನ್ನು ನೀಡಲಿದ್ದಾರೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡಪಾಟೀಲ್, ರಾಜ್ಯ ಬಿಜೆಪಿ ಸಹವಕ್ತಾರ ರಘುಕೌಟಿಲ್ಯ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬೂಕಹಳ್ಳಿ ಮಂಜು, ರೈತಮೋರ್ಚಾ ಜಿಲ್ಲಾಧ್ಯಕ್ಷ ರವೀಂದ್ರ,
ರಾಜ್ಯ ಬಿಜೆಪಿ ಯುವಘಟಕದ ಕಾರ್ಯದರ್ಶಿ ತಮ್ಮೇಶಗೌಡ, ಪದಾಧಿಕಾರಿಗಳಾದ ಪರಮಾನಂದ,ಆದಿತ್ಯ, ಮಲ್ಲಿಕಾರ್ಜುನ, ವಿಜಯಕುಮಾರ್, ಶೀಳನೆರೆ ಸಿದ್ಧೇಶ್ ಮತ್ತಿತರರು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!