Hiring Reporter’s For more Information Contact Above Number 876 225 4007 . Program producer
Home / Breaking News / ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಬಿಗ್ ಗಿಫ್ಟ್‌

ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಬಿಗ್ ಗಿಫ್ಟ್‌

Spread the love

ನವದೆಹಲಿ : ಗ್ರಾಮೀಣ ಭಾರತದಲ್ಲಿ ಪರಿವರ್ತನೆ ಮತ್ತು ಲಕ್ಷಾಂತರ ಭಾರತೀಯರ ಸಬಲೀಕರಣಕ್ಕೆ ಕಾರಣವಾಗುವ ಐತಿಹಾಸಿಕ ಕ್ರಮವಾದ ಸ್ವಾಮಿತ್ವ ಯೋಜನೆಯಡಿ ಆಸ್ತಿ ಕಾರ್ಡ್‌ಗಳ ಭೌತಿಕ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಅಕ್ಟೋಬರ್ 11 ರಂದು ಚಾಲನೆ ನೀಡಲಿದ್ದಾರೆ.

ಈ ಯೋಜನೆಯ ಚಾಲನೆಯಿಂದಾಗಿ ಸುಮಾರು ಒಂದು ಲಕ್ಷ ಆಸ್ತಿ ಮಾಲೀಕರು ತಮ್ಮ ಮೊಬೈಲ್ ನ ಎಸ್‌ಎಂಎಸ್ ಲಿಂಕ್ ಮೂಲಕ ತಮ್ಮ ಆಸ್ತಿ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದರ ನಂತರ ಆಯಾ ರಾಜ್ಯ ಸರ್ಕಾರಗಳು ಆಸ್ತಿ ಕಾರ್ಡ್‌ಗಳನ್ನು ಭೌತಿಕವಾಗಿ ವಿತರಿಸುತ್ತವೆ. ಆರು ರಾಜ್ಯಗಳ 763 ಗ್ರಾಮಗಳ ಜನರು ಫಲಾನುಭವಿಗಳಾಗಿದ್ದಾರೆ. ಇದರಲ್ಲಿ ಉತ್ತರ ಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44, ಉತ್ತರಾಖಂಡದ 50 ಮತ್ತು ಕರ್ನಾಟಕದಿ 2 ಹಳ್ಳಿಗಳು ಸೇರಿವೆ.

ಮಹಾರಾಷ್ಟ್ರವನ್ನು ಹೊರತುಪಡಿಸಿ ಈ ಎಲ್ಲಾ ರಾಜ್ಯಗಳ ಫಲಾನುಭವಿಗಳು ಒಂದೇ ದಿನದಲ್ಲಿ ಆಸ್ತಿ ಕಾರ್ಡ್‌ಗಳ ಭೌತಿಕ ಪ್ರತಿಗಳನ್ನು ಸ್ವೀಕರಿಸುತ್ತಾರೆ. ಮಹಾರಾಷ್ಟ್ರವು ಆಸ್ತಿ ಕಾರ್ಡ್‌ನ ಅತ್ಯಲ್ಪ ವೆಚ್ಚವನ್ನು ಪಡೆಯುವ ವ್ಯವಸ್ಥೆಯನ್ನು ಹೊಂದಿದ್ದು, ಇದು ಕಾರ್ಡ್ ವಿತರಿಸಲು ಒಂದು ತಿಂಗಳ ಸಮಯ ತೆಗೆದುಕೊಳ್ಳುತ್ತದೆ.

ಸಾಲ ಮತ್ತು ಇತರ ಹಣಕಾಸಿನ ಪ್ರಯೋಜನಗಳನ್ನು ಪಡೆಯಲು ಗ್ರಾಮಸ್ಥರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಈ ಕ್ರಮವು ದಾರಿ ಮಾಡಿಕೊಡುತ್ತದೆ. ಅಲ್ಲದೆ, ಲಕ್ಷಾಂತರ ಗ್ರಾಮೀಣ ಆಸ್ತಿ ಮಾಲೀಕರಿಗೆ ಅನುಕೂಲ ಕಲ್ಪಿಸುವ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಇಷ್ಟು ದೊಡ್ಡ ಪ್ರಮಾಣದ ಕ್ರಮ ಇದೇ ಮೊದಲಾಗಿದೆ.

ಈ ಸಂದರ್ಭದಲ್ಲಿ ಪ್ರಧಾನಿ ಕೆಲವು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಪಂಚಾಯತಿ ರಾಜ್ ಸಚಿವರು ಉಪಸ್ಥಿತರಿರುತ್ತಾರೆ. ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!