Hiring Reporter’s For more Information Contact Above Number 876 225 4007 . Program producer
Home / Breaking News / ಶಾಲೆ ಆರಂಭದ ಚರ್ಚೆ ನಡೆಸಿದ್ದ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್

ಶಾಲೆ ಆರಂಭದ ಚರ್ಚೆ ನಡೆಸಿದ್ದ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್

Spread the love

ಬೆಳಗಾವಿ : ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸಿರುವ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ವೊಂದು ಎದುರಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ. ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳಿಗೆ ಶುಕ್ರವಾರ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಶಾಲೆಯಲ್ಲಿ ಪಾಠ ಮಾಡಿದ 6 ಜನ ಶಿಕ್ಷಕರಿಗೂ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸೋಂಕು ದೃಢಪಟ್ಟ ಕಾರಣ 30 ವಿದ್ಯಾರ್ಥಿಗಳಿಗೆ ಮನೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಪಾಠ ಮಾಡಲು ಬಂದಿದ್ದ ಶಿಕ್ಷಕರನ್ನು ಗ್ರಾಮಸ್ಥರು ಊರಿನಿಂದ ಹೊರಗಿಟ್ಟಿದ್ದಾರೆ. ಶಿಕ್ಷಕರು ಸೇರಿದಂತೆ ಗ್ರಾಮಕ್ಕೆ ಯಾರೂ ಕೂಡ ಬರದಂತೆ ನಿಷೇಧ ಕೂಡ ಹೇರಿದ್ದಾರೆ. ಈ ಶಾಲೆಯಲ್ಲಿ ಒಟ್ಟು 191 ವಿದ್ಯಾರ್ಥಿಗಳಿದ್ದು, ಅದರಲ್ಲಿ 30 ವಿದ್ಯಾರ್ಥಿಗಳಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಶಾಲೆಯನ್ನು ಬಂದ್ ಮಾಡಲಾಗಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!