Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಡಿಸಿಪಿಗೆ ಅವಾಜ್ ಹಾಕಿದ ಬಿಜೆಪಿ ಮುಖಂಡ ರಾಜಣ್ಣ ಕೊರವಿ ದಂಡ ಬಿಸಿ ಮುಟ್ಟಿಸಿದ ಪೊಲೀಸರು…

ಡಿಸಿಪಿಗೆ ಅವಾಜ್ ಹಾಕಿದ ಬಿಜೆಪಿ ಮುಖಂಡ ರಾಜಣ್ಣ ಕೊರವಿ ದಂಡ ಬಿಸಿ ಮುಟ್ಟಿಸಿದ ಪೊಲೀಸರು…

ಲಾಕ್ ಡೌನ್ ವೇಳೆ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಾಜಿ‌ ಪಾಲಿಕೆ ಸದಸ್ಯರೊಬ್ಬರು ಡಿಸಿಪಿಗೆ ಅವಾಜ್ ಹಾಕಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.

ಸೀಟ್ ಬೆಲ್ಟ್ ಹಾಕದ್ದನ್ನ ಪ್ರಶ್ನಿಸಿದ ಡಿಸಿಪಿಗೆ ಮಾಜಿ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಡಿಸಿಪಿ ರಾಮರಾಜನ್ ಅವರಿಗೆ ಅವಾಜ್ ಹಾಕಿದ್ದಾನೆ.

ನಗರದ ಚೆನ್ನಮ್ಮ ವೃತ್ತದಲ್ಲಿ ತಮ್ಮ ಕಾರು ಚಾಲಕನೊಂದಿಗೆ ಆಗಮಿಸಿದ್ದ ರಾಜಣ್ಣ ಕೊರವಿ
ಸೀಟ್ ಬೆಲ್ಟ್ ಹಾಕದಿರುವ ಹಿನ್ನೆಲೆಯಲ್ಲಿ‌ ಡಿಸಿಪಿ ಸೀಟ್ ಬೆಲ್ಟ್ ಯಾಕೆ ಹಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಶ್ನೆ ಮಾಡಿದ ಡಿಸಿಪಿ ಜೊತೆಗೆ ರಾಜಣ್ಣ ಕೊರವಿ ವಾಗ್ವಾದಕ್ಕಿಳಿದಿದ್ದಾರೆ‌.

ನಾನು ಮಾಜಿ ಕಾರ್ಪೊರೇಟರ್.
ನಾನ್ಯಾರು ಅಂತಾ ಪರಿಚಯ ಮಾಡಿಕೊಳ್ಳಬೇಕಲ್ಲ ಎಂದು ಅವಾಜ್ ಹಾಕಿದ್ದಾರೆ. ಆಗ ಡಿಸಿಪಿ ನಮಗೆ ಯಾರಾದರೇನು ಎಂದಿದ್ದಾರೆ. ಅಷ್ಟಕ್ಕೆ ರಾಜಣ್ಣ ಕೊರವಿ ಹಾಗೂ ಅವರ ಕಾರು ಚಾಲಕ ಡಿಸಿಪಿ ಜೊತೆ ಮಾತಿನಚಕಮಕಿ ನಡೆಸಿದರು. ಕೊನೆಗೆ ಸೀಟ್ ಬೆಲ್ಟ್ ಹಾಕದ ರಾಜಣ್ಣ ಕೊರವಿಗೆ
ದಂಡ ಕಟ್ಟುವಂತೆ ಸೂಚನೆ ನೀಡಿದರು‌. ನಿಯಮಗಳನ್ನು ಉಲ್ಲಂಘಿಸಿದ ರಾಜಣ್ಣ ಕೊರವಿಗೆ ಕೊನೆಗೆ 500 ರೂ ದಂಡ ಕಟ್ಟಿ ತೆರಳಿದರು. ಈ ರಾಜಣ್ಣ ಕೊರವೊ
ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಪಿ ರಾಮರಾಜನ್, ಇದು‌ಪೊಲೀಸರಿಗೆ ಕಾಮನ್. ಜನಸಾಮಾನ್ಯರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿಯುತ್ತಾರೆ. ಆದ್ರೆ ನಾವಯ ಕಾನೂನು ‌ಪ್ರಕಾರ ತಪ್ಪು ಮಾಡಿದವರಿಗೆ ದಂಡ ವಿಧಿಸುವ ಕೆಲಸ ಮಾಡುತ್ತೇವೆ. ಯಾವುದೇ ರಾಜಕೀಯ ವ್ಯಕ್ತಿ, ಸಾಮಾನ್ಯ ವ್ಯಕ್ತಿ ಆದ್ರೂ ಕಾನೂನಿನ ಮುಂದೆ ಒಂದೇ ಎಂದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!