Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಇತಿಹಾಸದಿಂದ ಟಿಪ್ಪು ಹೆಸರನ್ನು ಇಲ್ಲವಾಗಿಸುವ ಪ್ರಯತ್ನದಲ್ಲಿ ಬಿ.ಜೆ.ಪಿ. : ಮೇವಾನಿ ಆಕ್ರೋಶ.

ಇತಿಹಾಸದಿಂದ ಟಿಪ್ಪು ಹೆಸರನ್ನು ಇಲ್ಲವಾಗಿಸುವ ಪ್ರಯತ್ನದಲ್ಲಿ ಬಿ.ಜೆ.ಪಿ. : ಮೇವಾನಿ ಆಕ್ರೋಶ.

ಚಿತ್ರದುರ್ಗ:ಟಿಪ್ಪು ಸುಲ್ತಾನ್ ಹೆಸರು ಇಲ್ಲವಾಗಿಸಲು ಯತ್ನಿಸಲಾಗುತ್ತಿದೆ. ಅದು ಆರ್ ಎಸ್ ಎಸ್, ಬಿಜೆಪಿ ಹಿಡನ್ ಅಜೆಂಡಾ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹೇಳಿದರು.
ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಟಿಪ್ಪು ಜಯಂತಿ ರದ್ದು, ಪಠ್ಯದಿಂದ ತೆಗೆಯುವ ವಿಚಾರವಾಗಿ ಮಾತನಾಡಿದ ಅವರು, ಹಿಂದೂ ತುಷ್ಠೀಕರಣಕ್ಕಾಗಿ ಇತಿಹಾಸವನ್ನು ಅಳಿಸಲು ಕೆಲಸ ಮಾಡಲಾಗುತ್ತಿದೆ.
ಮುಸ್ಲಿಂ ಸಮುದಾಯವನ್ನು ದಮನ ಮಾಡುವ ಕಾರ್ಯ ನಡೆಯುತ್ತಿದೆ.‌ಹಿಂದೂ ಮುಸ್ಲಿಂ ಸಮುದಾಯಗಳನ್ನು ಇಬ್ಭಾಗಿಸಲಾಗುತ್ತಿದೆ. ಆರ್ ಎಸ್ ಎಸ್ ಕೋಮುವಾದಿ ಮನೋಸ್ಥಿತಿ ಕೆಲಸ ಮಾಡುತ್ತಿದೆ. ವೈವಿಧ್ಯತೆಯಲ್ಲೂ ಏಕತೆಯಿಂದಿರುವುದೇ ದೇಶದ ಸೌಂದಯ್ಯ.
ಏಕತೆಯನ್ನು ನಾವು ಪಾಲಿಸಬೇಕಿದೆ ಎಂದರು.
ದೇಶದಲ್ಲಿ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ತಾಂಡವ ಆಡುತ್ತಿದೆ. ಪ್ರಧಾನ ಮಂತ್ರಿ ಮೋದಿ ಬಳಿ ಯಾವುದೇ ಉತ್ತರವಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರ ಹೂಡುತ್ತಿದ್ದಾರೆ. ನರೇಗಾ ಯೋಜನೆ, ಆರೋಗ್ಯ ಯೋಜನೆಗಳು ಮುಗ್ಗರಿಸಿವೆ. ಸಾವರ್ಕರ್ 13 ಸಲ ಆಂಗ್ಲರಿಗೆ ಕ್ಷಮೆ ಕೇಳಿ ಪತ್ರ ಬರೆದಿದ್ದಾರೆ. ಜನರಿಗೆ ಈಗ ಬಿಜೆಪಿ ಸರ್ಕಾರದ ಧೋರಣೆ ಅರಿವಾಗುತ್ತಿದೆ.
ಎಲ್ಲಾ ಪಕ್ಷದ ನಾಯಕರು ವಾಸ್ತವ ಪರಿಸ್ಥಿತಿ ಜನರ ಮುಂದಿಡಬೇಕಿದೆ. ಪ್ರಧಾನಿ ಮೋದಿ ಚಹಾ ಮಾರಿದ ಮಾತು ಚೈಲ್ಡಿಶ್, ಜೋಕ್ ಆಫ್ ದಿ ಸಂಚೂರಿ.
ಚಹಾ ಮಾರಿದ್ದಾರೋ ಇಲ್ಲವೋ ಈಗ ದೇಶ ಮಾರುತ್ತಿದ್ದಾರೆ. ಆರ್ ಎಸ್ ಎಸ್ ,ಬಿಜೆಪಿಗೆ ದಲಿತರು,‌ ಮುಸ್ಲಿಂರು 2ನೇ ದರ್ಜೆ ನಾಗರೀಕರು. ಕೆಲಸಕ್ಕೆ ಮಾತ್ರ ಬಳಸಿಕೊಳ್ಳುವುದು ಅವರ ಅಜೆಂಡಾ ಎಂದು ತಿಳಿಸಿದರು.

Share

About CHANNABASAVAIAH BIG TV NEWS, Chitradurga

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!