Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಉಪ ಚುನಾವಣೆ, ಬಿಜೆಪಿಯ ಗೆಲುವಿನ ಹಾದಿ ಸುಗಮ : ಡಿವಿಎಸ್

ಉಪ ಚುನಾವಣೆ, ಬಿಜೆಪಿಯ ಗೆಲುವಿನ ಹಾದಿ ಸುಗಮ : ಡಿವಿಎಸ್

ಮಂಗಳೂರು:- ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಸಂಬಂಧಿಸಿ ಈಗಾಗಲೇ ಬಿಜೆಪಿ ಎಲ್ಲಾ ರೀತಿಯಲ್ಲೂ ಸನ್ನದ್ಧ ಆಗಿದ್ದು, ಹದಿನೈದರಲ್ಲೂ ಬಿಜೆಪಿ ಗೆಲುವು ಸಾಧಿಸುತ್ತೇ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ  ಅಥಣಿ, ಕಾಗವಾಡ, ಗೋಕಾಕ್, ಎಲ್ಲಾಪುರ, ಹಿರೇಕೇರೂರು, ರಾಣೆಬೆನ್ನೂರು, ವಿಜಯ್ ನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿ ನಗರ, ಹೊಸಕೋಟೆ, ಕೆ.ಆರ್. ಪೇಟೆ ಹಾಗೂ ಹುಣಸೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಎಲ್ಲ ತರಹದ ಸಿದ್ದತೆ ಕೈಕೊಂಡಿದ್ದು, ತಳಮಟ್ಟದಲ್ಲಿ ಕಾರ್ಯಗಳು ಅಗುತ್ತಿದೆ ಎಂದರು.

ಇನ್ನೂ ಮಹಾರಾಷ್ಟ್ರದಲ್ಲಿ ಸೋಮವಾರ ರಾಜ್ಯಪಾಲರು ಸರಕಾರ ರಚನೆಗೆ ಅಹ್ವಾನಿಸಿದ್ದಾರೆ. ಪಡ್ನವೀಶ್ ಅವರು ಬಹುಮತ ತೋರ್ಪಡಿಸುತ್ತಾರೆ. ಬಿಜೆಪಿ ಮತ್ತು ಶಿವಸೇನೆಯ ಮಧ್ಯೆ ಯಾವುದೇ ಅಂತರವಿಲ್ಲ. ಸಮಸ್ಯೆಯನ್ಬು ಹೈಕಮಾಂಡ್ ಬಗೆಹರಿಸುತ್ತಾರೆ. ಸಿದ್ದರಾಮಯ್ಯ ಅವರು ವಿರೋಧಪಕ್ಷದ ನಾಯಕರಾಗಿ ಅವರು ಪಡುವ ಸಂದಿಗ್ಧತೆಯನ್ನು ಗಮನಿಸಿದಾಗ  ಕಾಂಗ್ರಸ್ ನ್ನೆ ಮುಗಿಸುವ ರೀತಿಯಲ್ಲಿದ್ದಾರೆ ಎಂದು ಆರೋಪಿಸಿದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!