Breaking News
Home / Breaking News / ಧರ್ಮೆಗೌಡ ಆತ್ಮಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಸಿ.ಟಿ. ರವಿ.

ಧರ್ಮೆಗೌಡ ಆತ್ಮಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಸಿ.ಟಿ. ರವಿ.

Spread the love

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ತಡರಾತ್ರಿ 1.30ರ ಸುಮಾರಿಗೆ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿ.ಟಿ.ರವಿ, ಚಿಕ್ಕಮಗಳೂರು ಎಸ್‌ಪಿ ಭೇಟಿ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಸಿ.ಟಿ.ರವಿ, ಧರ್ಮೇಗೌಡ ತನ್ನ ಡೈವರ್ ಜೊತೆ ಖಾಸಗಿ ಕಾರಿನಲ್ಲಿ ಗುಣಸಾಗರಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸುಮಾರು 4ಗಂಟೆಯಿಂದ ಇಲ್ಲೆ ಸುತ್ತಾಡಿ ಬಳಿಕ 6ಗಂಟೆಗೆ ರೈಲಿಗೆ ತಲೆ ಕೊಟ್ಟಿದ್ದಾರೆ. ಈ ವಿಷಯ ಮನೆಯವರಿಗೆ ತಿಳಿದಿದ್ದು ತಡ ರಾತ್ರಿ 12ಗಂಟೆಯ ನಂತರ. ಪೊಲೀಸರು ಧರ್ಮೇಗೌಡರ ಫೋನ್ ಟವರ್ ಲೊಕೇಶನ್ ಆಧರಿಸಿ ಟ್ರೇಸ್ ಮಾಡಿ 12.45ರ ಸಂದರ್ಭದಲ್ಲಿ ಮೃತದೇಹ ಪತ್ತೆ ಮಾಡಿದ್ದಾರೆ. ಬಳಿಕ ಮನೆಯವರಿಗೆ ವಿಷಯ ತಿಳಿಸಿದ್ದಾರೆ ಎಂದು ಸಿ.ಟಿ.ರವಿ ತಿಳಿಸಿದ್ರು.

About Admin BIG TV NEWS

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Spread the love

Leave a Reply

Your email address will not be published. Required fields are marked *

error: Content is protected !!