Breaking News
Hiring Reporter’s For more Information Contact Above Number 876 225 4007 . Program producer
Home / Breaking News / 26 ಕ್ಕೆ ಸಿದ್ದಾರೂಢಮಠದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವ.

26 ಕ್ಕೆ ಸಿದ್ದಾರೂಢಮಠದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವ.

 

ಹುಬ್ಬಳ್ಳಿ: ಶ್ರೀ ಸಿದ್ಧಾರೂಡ ಸ್ವಾಮಿ ಮಠ ಟ್ರಸ್ಟ್ ಕಮೀಟಿ ವತಿಯಿಂದ ಕಾರ್ತಿಕ ಮಾಸದ ಅಂಗವಾಗಿ ಶ್ರೀಸಿದ್ಧಾರೂಢ ಮಹಾಸ್ವಾಮಿ ಮಠದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನ. 26ರಂದು ಸಂಜೆ 6-30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಎಸ್.ಆಯ್.ಕೋಳಕೂರ ಹಾಗೂ ಚೇರ್ಮನ್ ಡಿ.ಡಿ.ಮಾಳಗಿ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಲಕ್ಷ ದೀಪೋತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ದೀಪೋತ್ಸವಕ್ಕೆ ಉತ್ತರ ಕರ್ನಾಟಕ ಭಾಗವಲ್ಲದೆ, ಮಹಾರಾಷ್ಟ್ರ, ಗೋವಾ ಸೇರಿದಂತೆ ಹಲವು ಹೊರ ರಾಜ್ಯಗಳ ಭಕ್ತರು ಪಾಲ್ಗೊಂಡು ಹಣತೆ ಹಚ್ಚಿ‌ ಭಕ್ತಿ ಸಮರ್ಪಣೆ ಮಾಡುವರು ಎಂದರು.
ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಈಶಪ್ಪ ಭೂತೆ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡವರು, ಸಿದ್ದಾರೂಡ ಮಠದ ಧರ್ಮದರ್ಶಿಗಳು,ಪದಾಧಿಕಾರಿಗಳು, ಸಿದ್ದಾರೂಡ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳು, ಜೈಂಟ್ಸ್ ಇಂಗ್ಲೀಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಅಂದು ಸುಮಾರು 40 ಸಾವಿರಕ್ಕೂ ಅಧಿಕ ಪ್ರಮಾಣದಲ್ಲಿ ಭಕ್ತರು ಪಾಲ್ಗೊಳ್ಳಲಿದ್ದು, ಭಕ್ತರೆಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಎಸ್‌.ನಾಯಕ, ಜಗದೀಶ ಮಗಜಿಕೊಂಡಿ, ಎನ್.ಎ.ಪಾಟಕ್, ಈರಣ್ಣ ತುಪ್ಪದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!