Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮೈಸೂರು

ಮೈಸೂರು

ಕಬಿನಿ ಹಿನ್ನೀರಿನಲ್ಲಿ ರೈಲ್ವೆ ಸುರಂಗ ಮಾರ್ಗ.

ಮೈಸೂರು: ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದರೆ ಕಬಿನಿ ಹಿನ್ನೀರು ಪ್ರದೇಶದಿಂದ ರೈಲ್ವೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇದರಿಂದ ಕೇರಳ-ಕರ್ನಾಟಕ ಪ್ರವಾಸೋದ್ಯಮ ಮತ್ತಷ್ಟು ಅಭಿವೃದ್ಧಿಯಾಗುವ ಜೊತೆಗೆ ಆರ್ಥಿಕ ಚಟುವಟಿಕೆ ಚುರುಕುಗೊಳ್ಳಲಿದೆ. ಮೈಸೂರು-ಮಲಬಾರ್ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, 22 ಕಿ.ಮೀ. ಸುರಂಗ ಮಾರ್ಗವನ್ನೊಳಗೊಂಡ ರೈಲು ಮಾರ್ಗದ ನೀಲನಕ್ಷೆಯನ್ನು ಮಲಬಾರ್-ಮೈಸೂರು ರೋಡ್ ರೈಲ್ವೆ ಅಭಿವೃದ್ಧಿ ಸಮಿತಿಯ ಕೇರಳ ರಾಜ್ಯ‌ ಸಮಿತಿ ಸಂಯೋಜಕ ಉಮೇಶ್ ಪೊಚ್ಚಪ್ಪನ್, ಕರ್ನಾಟಕ ರಾಜ್ಯ …

Read More »

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯ ಮಹತ್ವದ ಮಾಹಿತಿ.

ಮೈಸೂರು: ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡುವ ಮೂಲಕ ವಿದ್ಯಾರ್ಥಿಗಳ ಆತಂಕವನ್ನು ಮೈಸೂರು ವಿಶ್ವವಿದ್ಯಾನಿಲಯ ದೂರ ಮಾಡಿದೆ. ಬಾಕಿ ಉಳಿದಿದ್ದ ವಿಷಯಗಳ ಪರೀಕ್ಷೆ ಬರೆಯದೇ ಮುಂದಿನ ಸೆಮಿಸ್ಟರ್​ಗೆ ವಿದ್ಯಾರ್ಥಿಗಳು ಜಿಗಿದಿದ್ದಾರೆ. 2 ಮತ್ತು 4ನೇ ಸೆಮಿಸ್ಟರ್​ಗೆ ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳು ಪಾಸ್ ಆಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ. ಕಳೆದ ಸೆಮಿಸ್ಟರ್​ಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಲಾಗಿದೆ. ಸದ್ಯ ಫೇಲ್​ ಆಗಿರುವ ವಿದ್ಯಾರ್ಥಿಗಳ …

Read More »

ತಾರಕಕ್ಕೇರಿದ ಡಿಸಿ ರೋಹಿಣಿ ಸಿಂಧೂರಿ ಹಾಗೂ ಹುಣಸೂರು ಶಾಸಕರ ವಾಕ್ ಸಮರ.

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಹುಣಸೂರು ಶಾಸಕ ಹೆಚ್​.ಪಿ.ಮಂಜುನಾಥ್ ನಡುವೆ ಮಾತಿನ ಸಮರ ತಾರಕಕ್ಕೇರಿದೆ.‌ ಎರಡು ರಾಜ್ಯದ ಸಿಎಂಗಳು ನಿಮ್ಮ ಬೆನ್ನಿಗಿದ್ದಾರೋ ಅಥವಾ ಕಾಲು ಕೆಳಗಿದ್ದಾರೋ ಗೊತ್ತಿಲ್ಲ. ಸಮಯ ಹೀಗೆ ಇರುವುದಿಲ್ಲ‌ ರೋಹಿಣಿ ಸಿಂಧೂರಿ ಅವರೇ? ಕಾನೂನಿನ ಪ್ರಕ್ರಿಯೆಯಲ್ಲಿ ನೀವು ಒಂದು ದಿನ‌ ಸಿಲುಕಿಕೊಳ್ಳುತ್ತೀರಾ? ಆಗ ನಿಮಗೆ ಕಾನೂನು ಅರಿವಾಗುತ್ತದೆ ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ಕಾನೂನಿಗಿಂತ ದೊಡ್ಡವರಲ್ಲ. ನಿಮ್ಮನ್ನು …

Read More »

ಖಾಸಗಿ ಶಾಲೆಗಳ ಆನಲೈನ್ ಶಿಕ್ಷಣಕ್ಕೆ ಕಠಿಣ ಕಾನೂನು ಅಗತ್ಯ.

ಮೈಸೂರು: ಖಾಸಗಿ ಶಾಲೆಗಳು ಆನ್‌ಲೈನ್ ಶಿಕ್ಷಣಕ್ಕೆ ಶುಲ್ಕ ವಸೂಲಿ ಮಾಡುತ್ತಿರುವುದರಿಂದ ಮಧ್ಯಮವರ್ಗದ ಜನ ಕಷ್ಟಪಡುವಂತಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ. ಸುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಶಿಕ್ಷಣ ಇಲಾಖೆ ಕಠಿಣ ನಿರ್ಧಾರ ಕೈಗೊಳ್ಳಬೇಕು. ಕೇವಲ ಕಠಿಣ ನಿರ್ಧಾರವಲ್ಲ, ಅದನ್ನ ಕಾರ್ಯರೂಪಕ್ಕೆ ತರಬೇಕು ಎಂದು ಸಲಹೆ ನೀಡಿದರು. ನಮಗೆಲ್ಲ ಸಂಬಳ ಹಿಡಿದಿದ್ದಾರೆ, ಶೇ.30ರಷ್ಟು ಸಂಬಳ ಹಿಡಿದು ಟಿಎಡಿಎ ಕಟ್ ಮಾಡಿದ್ದಾರೆ. ಆದ್ರೆ ಸರ್ಕಾರ ನೌಕರರಿಗೆ ಮಾತ್ರ ಸಂಬಳ …

Read More »

ಉದ್ಘಾಟನೆಗೂ ಮುನ್ನವೇ ಬಿರುಕುಬಿಟ್ಟ ಸಾರ್ವಜನಿಕ ಕಟ್ಟಡ.

ಮೈಸೂರು : ಉದ್ಘಾಟನೆಗೂ ಮುನ್ನವೇ ನಂಜನಗೂಡು ತಾಲೂಕಿನಲ್ಲಿರುವ ಮಾರುಕಟ್ಟೆಯ ಕಟ್ಟಡಗಳಲ್ಲಿ ಬಿರುಕು ಬಿಟ್ಟಿದ್ದು, ಗುತ್ತಿಗೆದಾರ ಹಾಗೂ ಅಧಿಕಾರಿಗಳ ಕಾರ್ಯವೈಖರಿಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಅಧಿಕಾರಿಗಳ ನಿರ್ಲಕ್ಷ ಮತ್ತು ಗುತ್ತಿಗೆದಾರರ ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ, ಉದ್ಘಾಟನೆಗೂ ಮುನ್ನವೇ ಮಾರುಕಟ್ಟೆ ಕಟ್ಟಡದಲ್ಲಿ ಬಿರುಕು ಬಿಟ್ಟಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ನಂಜನಗೂಡು ನೂತನ ಮಾರುಕಟ್ಟೆ ಕಟ್ಟಡ‌ ಇದೀಗ ಅಪಾಯದ ಕೂಪಕ್ಕೆ ಕೈಬೀಸಿ ಕರೆಯುತ್ತಿದೆ. ನಂಜನಗೂಡು ಪಟ್ಟಣದ ಬಜಾರ್ ರಸ್ತೆಯಲ್ಲಿ 2016ರಲ್ಲಿ ವಿ. ಶ್ರೀನಿವಾಸ್ ಪ್ರಸಾದ್ ಕಂದಾಯ …

Read More »

ಸಂಪುಟ ರಚನೆಯೋ, ವಿಸ್ತರಣೆಯೋ ಆ ದೇವರಿಗೆ ಗೊತ್ತು!

ಮೈಸೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬುದು ಅಮಿತ್ ಶಾ, ಮೋದಿ ಮತ್ತು ದೇವರಿಗೆಯೇ ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ, ಪುನರ್ ರಚನೆ ಬಗ್ಗೆ ಬಲ್ಲವರು ಅಮಿತ್ ಶಾ, ಮೋದಿ. ಇಲ್ಲದಿದ್ದರೆ ಆ ದೇವರಿಗೇ ಗೊತ್ತು. ಇತ್ತೀಚೆಗಷ್ಟೇ ದೆಹಲಿಗೆ ಸಿಎಂ ಹೋಗಿ ಜೆ.ಪಿ.ನಡ್ಡಾ ಅವರನ್ನು ಮಾತನಾಡಿಸಿ ಬಂದಿದ್ದಾರೆ. ಅವರ …

Read More »

ಕಾಡಾನೆ ದಾಳಿ : ವ್ಯಕ್ತಿ ಬಲಿ.

ಮೈಸೂರು: ಕಾಡಾನೆಯೊಂದು ಇಂದು ಬೆಳ್ಳಂಬೆಳಗ್ಗೆ ಮನೆ ಮೇಲೆ ದಾಳಿ ಮಾಡಿದ್ದು, ವ್ಯಕ್ತಿವೋರ್ವ ಬಲಿಯಾಗಿದ್ದಾನೆ. ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ನಡೆದಿದೆ. ದಾಳಿಯಲ್ಲಿ ಮೃತಪಟ್ಟ ವ್ಯಕ್ತಿ ಚಿನ್ನಪ್ಪ (58) ಹಾಗೂ ಈತನ ಪತ್ನಿ ಕೊಟ್ಟೂರಮ್ಮ ಗಂಭೀರವಾಗಿ ಗಾಯಗೊಂಡಿದ್ದಾಳೆ. ಎರಡು ಮನೆಗಳು ಸಂಪೂರ್ಣ ಜಖಂ ಆಗಿದ್ದು, ಆನೆ ಚಿನ್ನಪ್ಪನ ಮೇಲೆ ದಾಳಿ ಮಾಡುವ ಸಂದರ್ಭದಲ್ಲಿ ಪತ್ನಿ ತಡೆಯಲು ಹೋದಾಗ ಆಕೆಗೂ ಗಾಯವಾಗಿದೆ. ಗಾಯಾಳು ಕೊಟ್ಟೂರಮ್ಮ ಹೆಚ್.ಡಿ.ಕೋಟೆ …

Read More »

ಮದುವೆಗೂ ಮುನ್ನ ಮಸಣ ಸೇರಿದ ವಧು-ವರ.

ಮೈಸೂರು: ಪ್ರಿ ವೆಡ್ಡಿಂಗ್​ ಫೋಟೋಶೂಟ್​ ಮಾಡುತ್ತಿದ್ದ ವೇಳೆ ವಧು-ವರ ಸಾವನ್ನಪ್ಪಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ಕಾವೇರಿ ಸಂಗಮದಲ್ಲಿ ನಡೆದಿದೆ. ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್​ ವೇಳೆ ತೆಪ್ಪ ಮುಳುಗಿ ವಧು-ವರ ಅಸುನೀಗಿದ್ದಾರೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ವಧು ಶಶಿಕಲಾ, ವರ ಚಂದ್ರು ಮೃತ ಪಟ್ಟಿದ್ದಾರೆ. ತಲಕಾಡಿನ ಮುಡುಕುತೊರೆಯ ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ನಿಂತು ಫೋಟೋ ಶೂಟ್ ಮಾಡುತ್ತಿದ್ದಾಗ ಆಯತಪ್ಪಿ ಶಶಿಕಲಾ ನದಿಗೆ ಬಿದ್ದಿದ್ದಾರೆ. ಶಶಿಕಲಾಳನ್ನು ಹಿಡಿಯಲು ಹೋಗಿ …

Read More »

ಮಹಿಳೆ ಸಜೀವ ದಹನ.

ಮೈಸೂರು: ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಮಹಿಳೆಯ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಹೊಸಕೋಟೆ ಗ್ರಾಮದ ರಸ್ತೆಯಲ್ಲಿ ಘಟನೆ ನಡೆದಿದೆ. ಇಂದು ಮುಂಜಾನೆ ರಸ್ತೆಯಲ್ಲಿ ಹೊತ್ತಿ ಉರಿಯುತ್ತಿರುವ ಮಹಿಳೆಯ ಶವವನ್ನು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಪಿರಿಯಾಪಟ್ಟಣ ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಗ್ರಾಮಸ್ಥರಿಂದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಅಪರಿಚಿತ ಮಹಿಳೆಯ ಕೊಲೆಗೈದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಪಿರಿಯಾಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ …

Read More »

ಮಹಿಳೆ ಸಜೀವ ದಹನ : ಕೊಲೆ ಶಂಕೆ

ಮೈಸೂರು: ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಮಹಿಳೆಯ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಹೊಸಕೋಟೆ ಗ್ರಾಮದ ರಸ್ತೆಯಲ್ಲಿ ಘಟನೆ ನಡೆದಿದೆ. ಇಂದು ಮುಂಜಾನೆ ರಸ್ತೆಯಲ್ಲಿ ಹೊತ್ತಿ ಉರಿಯುತ್ತಿರುವ ಮಹಿಳೆಯ ಶವವನ್ನು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಪಿರಿಯಾಪಟ್ಟಣ ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಗ್ರಾಮಸ್ಥರಿಂದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಅಪರಿಚಿತ ಮಹಿಳೆಯ ಕೊಲೆಗೈದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಪಿರಿಯಾಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ …

Read More »

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ.

ಮೈಸೂರು: ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆಯಾಗುವ ಮೂಲಕ ಭಯದ ವಾತಾವರಣ ದೂರ ಮಾಡಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಚಿಕ್ಕಾಡನಹಳ್ಳಿ ಗ್ರಾಮದ ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ 5 ವರ್ಷದ ಗಂಡು ಚಿರತೆ ಬಿದ್ದಿದೆ. ಹಲವು ದಿನಗಳಿಂದ ಗ್ರಾಮದಲ್ಲಿ ಜಾನುವಾರಗಳನ್ನ ತಿಂದು ಭಯ ಹುಟ್ಟಿಸಿದ್ದ ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಕಳೆದ ಒಂದು ವಾರದ ಹಿಂದೆ ಅರಣ್ಯಾಧಿಕಾರಿಗಳು ಬೋನು …

Read More »

ಅಕ್ರಮ ಆನೆದಂತ ಮಾರಾಟಗಾರರ ಬಂಧನ.

ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸಿದ ನಾಲ್ವರನ್ನು ಅರಣ್ಯ ಸಂಚಾರಿ ದಳ ಬಂಧಿಸಿದೆ. ಕೇರಳದ ತ್ರಿವೆಂಡ್ರಮ್​ನ ಪ್ರೆಸ್ಟಿನ್ ಸಿಲ್ವ, ಜಯಪ್ರಕಾಶ, ಮೈಸೂರಿನ ಉದಯಗಿರಿಯ ಮೋಹನ್, ರಮೇಶ್ ಬಂಧಿತರು. 25 ಕೆಜಿ ತೂಕವಿರುವ ಅಂದಾಜು 5 ಲಕ್ಷ ರೂ. ಮೌಲ್ಯದ 8 ದಂತಗಳನ್ನು ಮಾರಾಟ ಮಾಡಲು ಆರೋಪಿಗಳು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬನ್ನಿ ಮಂಟಪದ ಬ್ರಿಡ್ಜ್ ಬಳಿ ಸಂಚಾರಿ ದಳದ ಡಿಸಿಎಫ್ ಎ.ಟಿ.ಪೂವಯ್ಯ ನೇತೃತ್ವದಲ್ಲಿ ದಾಳಿ‌ ನಡೆಸಿ, …

Read More »

ಮೈಸೂರು ಕೋರ್ಟ್ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್.

ಮೈಸೂರು: ರಾಜ್ಯದಲ್ಲಿ ಕೋವಿಡ್ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಲ್ಲಿನ ಕೋರ್ಟ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪ ರದ್ದುಪಡಿಸಲಾಗಿದೆ. ಮೈಸೂರಿನ ಹಳೆ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದಲ್ಲಿ ನಡೆಯಲಿರುವ ಎಲ್ಲಾ ಕಲಾಪಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಕೋರ್ಟ್ ಗೆ ಸ್ಯಾನಿಟೈಸರ್ ಸಿಂಪಡಿಸುವ ಉದ್ದೇಶದಿಂದ ಕೋರ್ಟ್ ಕಲಾಪಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಹಾಗೂ ಹೊಸ ನ್ಯಾಯಾಲಯದಲ್ಲಿ ಎಂದಿನಂತೆ ಕಲಾಪಗಳು ನಡೆಯುತ್ತವೆ …

Read More »

ಸೆಪ್ಟೆಂಬರ್ ನಲ್ಲಿ ಅಂತಿಮ ಪದವಿ ಪರೀಕ್ಷೆ.

ಮೈಸೂರು: ಸೆಪ್ಟೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಅಂತಿಮ ‌ವರ್ಷದ ಪದವಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ಕುಲಪತಿಗಳ ಕಚೇರಿಯಲ್ಲಿ ಮಾತನಾಡಿ, ಕೊರೊನಾ ಹಿನ್ನೆಲೆ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ, ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (ಎಂಹೆಚ್​​ಆರ್​ಡಿ) ಸೂಚನೆಯಂತೆ ವಿವಿಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಲೇಜುಗಳಿಗೆ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯಾ ವರ್ಷದ …

Read More »

ಆಶಾ ಕಾರ್ಯಕರ್ತೆಗೆ ಧಮ್ಕಿ ಹಾಕಿದ ಪುಂಡರು

ಮೈಸೂರು: ಇಲ್ಲಿನ ಅಲೀಂ ನಗರದಲ್ಲಿ ಮಾಸ್ಕ್ ಹಾಕಿಕೊಳ್ಳಿ ಎಂದು ಸಲಹೆ ನೀಡಿದ ಆಶಾ ಕಾರ್ಯಕರ್ತೆಗೆ ಪುಂಡರು ಬೆದರಿಕೆ ಹಾಕಿದ್ದಾರೆ. ಸುಮಯಾ ಫಿರ್ದೋಶ್ ಎಂಬುವವರಿಗೆ ಅಲೀಂ ನಗರದ ಮೆಹಬೂಬ್, ಖಲೀಲ್, ಜೀಸಸ್ ಬೆದರಿಕೆ ಹಾಕಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸದೆ ಗುಂಪಾಗಿ ಕೂತಿದ್ದವರಿಗೆ ಸುಮಯಾ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ. ಈ ಸೂಚನೆಯಿಂದ ಕೆರಳಿದ ಮೂವರು ಪುಂಡರು ಆಶಾ ಕಾರ್ಯಕರ್ತೆ ವಿರುದ್ಧ ಬೆದರಿಕೆ ಹಾಕಿ, ಜಗಳಕ್ಕಿಳಿದಿದ್ದಾರೆ. ಈ ಘಟನೆ ಕುರಿತು ಸುಮಯಾ ಎನ್.ಆರ್. ಠಾಣೆ …

Read More »
error: Content is protected !!