Breaking News
Hiring Reporter’s For more Information Contact Above Number 876 225 4007 . Program producer
Home / Breaking News / ದಾವಣಗೆರೆ

ದಾವಣಗೆರೆ

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಭಾಗಿಯಾಗಿದ್ದ ಯಡಿಯೂರಪ್ಪ, ನಮ್ಮ ಪಕ್ಷದ ಶಾಸಕರನ್ನು ಡಿ.ಕೆ. ಶಿವಕುಮಾರ್ ಸಂಪರ್ಕ ಮಾಡಿದ್ದಾರೆ. ಒಂದಿಬ್ಬರು ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಯಾರೂ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ …

Read More »

ರೈತ ವಿರೋಧಿ ನೀತಿ ಖಂಡಿಸಿ ಡಿ.7 ರಂದು ವಿಧಾನಸೌಧಕ್ಕೆ ಮುತ್ತಿಗೆ.

ದಾವಣಗೆರೆ: ಭೂ ಸುಧಾರಣೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಡಿಸೆಂಬರ್ 7 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ರೈತ ವಿರೋಧಿ ನೀತಿಗಳ ವಿರುದ್ಧ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಆಗಬೇಕಿದ್ದು, …

Read More »

ರಾಜ್ಯದ ಮೊದಲ ಕೋವಿಡ್ ಕಂಟ್ರೋಲ್ ರೂಮ್ ಎಲ್ಲಿದೆ ಗೊತ್ತಾ?

ದಾವಣಗೆರೆ: ಕೊರೊನಾ ಸೋಂಕಿತರಿಗೆ ತ್ವರಿತ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಮೇಲ್ವಿಚಾರಣೆ, ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಜಿಲ್ಲಾ ಕೋವಿಡ್ ಕಂಟ್ರೋಲ್ ರೂಮ್​ ರಚಿಸಲಾಗಿದ್ದು, ಇದು ರಾಜ್ಯದಲ್ಲೇ ವ್ಯವಸ್ಥಿತವಾದ ಮತ್ತು ಮಾದರಿಯಾದ ಕಂಟ್ರೋಲ್ ರೂಮ್​ ಆಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ. ಜಿಲ್ಲಾಡಳಿತ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಕೋವಿಡ್-19 ಕಂಟ್ರೋಲ್ ರೂಮ್​ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಕೋವಿಡ್ ಫಲಿತಾಂಶಗಳನ್ನು ದೇಶಾದ್ಯಂತ ಐಸಿಎಂಆರ್ ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಲಾಗುತ್ತಿತ್ತು. ಆ್ಯಪ್ …

Read More »

ಮದುವೆಯಲ್ಲಿ ಕೊರೋನಾ ವಾರಿಯರ್ಸ್ ಗೆ ಸನ್ಮಾನ.

ದಾವಣಗೆರೆ: ವಿವಾಹ ಎಂದರೆ ಅದ್ಧೂರಿ ಸಂಭ್ರಮ, ಸಡಗರ ಮನೆ ಮಾಡಿರುತ್ತದೆ. ಸಂಬಂಧಿಕರು, ನೆಂಟರು, ಸ್ನೇಹಿತರು, ಬಂಧು ಬಳಗದವರು ನೆರೆದಿರುತ್ತಾರೆ. ಆದ್ರೆ ನಗರದಲ್ಲಿ ಓರ್ವ ವ್ಯಕ್ತಿ ತನ್ನ ಪುತ್ರಿಯ ಮದುವೆ ವೇಳೆ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಪುಷ್ಕಳ ಭೋಜನ, ಹೊಸ ಒಡವೆ, ವಸ್ತ್ರ ತೊಟ್ಟು, ಬಂಧು ಬಾಂಧವರೊಂದಿಗೆ ಸಂಭ್ರಮಿಸುವುಕ್ಕೆ ಮದುವೆ ಸೂಕ್ತ ವೇದಿಕೆಯೂ ಹೌದು. ಆದರೆ ಇಲ್ಲೊಬ್ಬರು ತಮ್ಮ ಮಗಳ ಮದುವೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲು …

Read More »

ಗಾಂಧಿಯಿಂದ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ!

ದಾವಣಗೆರೆ: “ಗಾಂಧೀಯಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ.ಮಹಾತ್ಮಾ ಗಾಂಧಿ ರಾಷ್ಟ್ರಪಿತ ಅಲ್ಲ. ರಾಷ್ಟ್ರಪಿತರು ಎಂಬುದಕ್ಕೆ ದಾಖಲೆ ಇದ್ದರೆ ನೀಡಿ” ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ‌. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಆರ್​ಟಿಐ ಮೂಲಕ ಮಾಹಿತಿ ಪಡೆದಿದ್ದೇವೆ. ಸಂವಿಧಾನದಲ್ಲಿ ಯಾವುದೇ ರಾಷ್ಟ್ರಪಿತನ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ತಪ್ಪು ಮಾಹಿತಿ ನೀಡುತ್ತಿವೆ. ನಾವು ಮುಂದೆ ಸರ್ಕಾರ, ಪಠ್ಯ ಪುಸ್ತಕ ರಚನಾ …

Read More »

ದಾವಣಗೆರೆ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ.

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಗಳಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಉಳಿದವರಿಗೆ ಆನ್‍ಲೈನ್‍ನಲ್ಲಿ ಮಾತ್ರ ತರಗತಿ ನಡೆಸಲು ಸೂಚಿಸಲಾಗಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ. ಸರ್ಕಾರ ಮತ್ತು ಯುಜಿಸಿ ಸೂಚನೆಯಂತೆ ಅಂತಿಮ ವರ್ಷದ ಅಂದರೆ ಸ್ನಾತಕ ಪದವಿಯ 5ನೇ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್​ಗೆ ಮಾತ್ರ ಭೌತಿಕ ಹಾಗೂ ಆನ್‍ಲೈನ್ ತರಗತಿ ನಡೆಸಲಾಗುವುದು. ಯಾವ ಮಾಧ್ಯಮದಲ್ಲಿ …

Read More »

ದಾವಣಗೆರೆ ಬೀರಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಅರ್ಚಕ ನೇಮಕ : ಖ್ಯಾತೆ ತೆಗೆದ ಹಳೆಯ ಅರ್ಚಕ.

ದಾವಣಗೆರೆ: ನಗರದ ಬೀರಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಅರ್ಚಕರ ನೇಮಕಕ್ಕೆ ದೇಗುಲದ ಹಳೆಯ ಅರ್ಚಕ ಹಾಗೂ ಆತನ ಕುಟುಂಬದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಳ್ಳಾಟ, ನೂಕಾಟ ಮತ್ತು ಮಾತಿನ ಚಕಮಕಿ‌ ನಡೆಯಿತು. ದೇವಸ್ಥಾನದ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಬೀರಲಿಂಗೇಶ್ವರ ದೇಗುಲಕ್ಕೆ ಜಿಲ್ಲಾಡಳಿತದ ಆದೇಶದ ಮೇರೆಗೆ ಬೀಗ ಹಾಕಲಾಗಿತ್ತು. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ದೇಗುಲದಲ್ಲಿ ಪೂಜೆ ನಡೆಸುತ್ತಿದ್ದ ಅರ್ಚಕ ನಿಂಗರಾಜ್ ಕುಟುಂಬದ ನಡುವೆ ವ್ಯಾಜ್ಯ …

Read More »

ಭತ್ತ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ಅನ್ನದಾತರ ಪ್ರತಿಭಟನೆ.

ದಾವಣಗೆರೆ: ಜಿಲ್ಲೆಯಲ್ಲಿ‌ ಮೆಕ್ಕೆಜೋಳ ಹಾಗೂ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಎಸಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವರ್ಷ ಉತ್ತಮ ಮಳೆಯಾಗಿದೆ. ಮೆಕ್ಕೆಜೋಳ, ಭತ್ತ ಬೆಳೆಯೂ ಚೆನ್ನಾಗಿ ಬಂದಿದೆ. ಆದರೆ ರೈತರು ಬೆಳೆದ ಬೆಳೆಗೆ ಒಳ್ಳೆಯ ದರ ಸಿಗುತ್ತಿಲ್ಲ. ಮೆಕ್ಕೆಜೋಳ ಹಾಗೂ …

Read More »

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ.

ದಾವಣಗೆರೆ: ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯನ್ನು ಹೊನ್ನಾಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಹೋಂ ಗಾರ್ಡ್ ಸತೀಶ್ ಎಂಬುವವರ ಪುತ್ರಿ ಕಾವ್ಯ ಇಂದು ಹೊನ್ನಾಳಿಯ ಸೇತುವೆಯ ಮೇಲಿಂದ ತುಂಗಾಭದ್ರಾ ನದಿಗೆ ಹಾರಿದ್ದಾಳೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಠಾಣೆ ಸೇತುವೆ ಸಮೀಪವೇ ಇದ್ದ ಕಾರಣ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ತೆಪ್ಪದಲ್ಲಿ ಹಾಗೂ ಈಜು ಬರುತ್ತಿದ್ದ ಪೊಲೀಸ್ ಸಿಬ್ಬಂದಿ, ಸ್ಥಳೀಯರು ನದಿಗೆ ಹಾರಿ …

Read More »

ದಾವಣಗೆರೆ ಎಸ್ಪಿ ಕೊರೋನಾದಿಂದ ಗುಣಮುಖ.

ದಾವಣಗೆರೆ: ಆಗಸ್ಟ್ 7 ರಂದು ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ಪಿ ಹನುಮಂತರಾಯ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಾರದ ಹಿಂದೆ ರ್ಯಾಪಿಡ್ ಟೆಸ್ಟ್ ಮಾಡಿಸಿದಾಗ ಇವರಿಗೆ ಸೋಂಕು ತಗುಲಿದ್ದು ಖಾತ್ರಿಯಾಗಿತ್ತು. ನಂತರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು ಹೋಂ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ‌. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಒಂದು ವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಈಗ ನನ್ನಲ್ಲಿ ಸೋಂಕಿನ ಲಕ್ಷಣಗಳಿಲ್ಲ. ಪರೀಕ್ಷೆಯಲ್ಲಿ ಕೊರೊನಾ …

Read More »

ನಗರದೇವತೆಗಳ ಜಾತ್ರೆ ಹಿನ್ನಲೆ : ಪ್ರಾಣಿಬಲಿ ನಿಷೇಧ

ದಾವಣಗೆರೆ : ನಗರದಲ್ಲಿ ಫೆ.29 ರಿಂದ ಮಾ.20 ರವರೆಗೆ ನಗರದೇವತೆ ಶ್ರೀದುರ್ಗಾಂಬಿಕಾದೇವಿ ಹಾಗೂ ವಿನೋಬನಗರದ ಚೌಡೇಶ್ವರಿದೇವಿ ಜಾತ್ರೆ ನಡೆಯಲಿದ್ದು, ಈ ಜಾತ್ರೆಯಲ್ಲಿ ದೇವರ ಹೆಸರಿನಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳ ಆವರಣದಲ್ಲಿ ಕುರಿ, ಕೋಳಿ ಹಾಗೂ ಕೋಣವನ್ನು ಬಲಿಕೊಡುವಂತಹ ಅನಿಷ್ಟ ಹಾಗೂ ಅನಾಗರಿಕ ಮತ್ತಿತರೆ ಪದ್ದತಿಗಳನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಜಿಲ್ಲಾಡಳಿತವು ಕರ್ನಾಟಕ ಪ್ರಾಣಿಬಲಿ ಪ್ರತಿಬಂಧಕ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. ಶ್ರೀದುರ್ಗಾಂಬಿಕಾ ದೇವಿ …

Read More »

ಮೊಮ್ಮಗನ ಕಾರು ಅಪಘಾತ: ಶಾಸಕ ರವೀಂದ್ರನಾಥ ಸ್ಪಷ್ಟನೆ.

ದಾವಣಗೆರೆ, ಫೆಬ್ರವರಿ 24: ದಾವಣಗೆರೆ ಹೊರವಲಯದ ಶಾಮನೂರಿನಲ್ಲಿ ನಿನ್ನೆ ತಡ ರಾತ್ರಿ ಶಾಸಕ ಎಸ್.ಎ. ರವೀಂದ್ರನಾಥ ಅವರ ಮೊಮ್ಮಗನ ಕಾರು ಅಪಘಾತವಾಗಿದ್ದು, ಈ ಕುರಿತು ಶಾಸಕರು ಸ್ಪಷ್ಟನೆ ನೀಡಿದ್ದಾರೆ. ಅವರ ಮೊಮ್ಮಗ ಅರುಣ್ ಕುಮಾರ್ ಇನೋವಾ ಕಾರನ್ನು ಅತಿ ವೇಗವಾಗಿ ಓಡಿಸಿ ಅಪಘಾತ ಮಾಡಿರುವುದಾಗಿ ಸ್ಥಳೀಯರು ತಿಳಿಸಿದ್ದರು. ಜೊತೆಗೆ ಅವರು ಮದ್ಯಪಾನ ಮಾಡಿರುವುದಾಗಿಯೂ ಆರೋಪಿಸಿದ್ದರು. ಇದಕ್ಕೆ ಉತ್ತರಿಸಿರುವ ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್, “ಅಪಘಾತವಾದ ಕಾರು ನನ್ನದೇ. …

Read More »

ಶಾಸಕರ ಮೊಮ್ಮಗನ ಕಾರ್​ ಅಪಘಾತ; ವಿದ್ಯುತ್ ಕಂಬ ಮುರಿದು ಮನೆಗೆ ಡಿಕ್ಕಿ.

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಮೊಮ್ಮಗನ ಕಾರು ನಿನ್ನೆ ತಡರಾತ್ರಿ ಅಪಘಾತಕ್ಕೀಡಾಗಿದೆ. ದಾವಣಗೆರೆ ನಗರದ ಹೊರವಲಯದ ಶಾಮನೂರಿನಲ್ಲಿ ಘಟನೆ ನಡೆದಿದೆ. ಶಾಸಕ ರವೀಂದ್ರನಾಥ್ ಪುತ್ರಿಯಾದ ಪಾಲಿಕೆ ಸದಸ್ಯೆ ವೀಣಾ ಹಾಗೂ ನಂಜಪ್ಪ ಅವರ ಪುತ್ರ ಅರುಣ್​​ ಕುಮಾರ್ ಅಪಘಾತವೆಸಗಿದ ಯುವಕ. ಅವರ ಇನ್ನೋವಾ ಕಾರು ವಿದ್ಯುತ್​​ ಕಂಬಕ್ಕೆ ಡಿಕ್ಕಿ ಹೊಡೆದು, ಬಳಿಕ ಮನೆಯೊಂದಕ್ಕೆ ಗುದ್ದಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್​ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. …

Read More »

ದಾವಣಗೆರೆ ಮೇಯರ್ ಆಗಿ ಬಿಜೆಪಿಯ ಅಜಯ್ ಕುಮಾರ್ ಆಯ್ಕೆ

ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಬಿಜೆಪಿಯ ಅಜಯ್ ಕುಮಾರ್ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಆಗಿ, ಉಪಮೇಯರ್ ಸೌಮ್ಯಾ ಆಯ್ಕೆ ಆಗಿದ್ದಾರೆ. ದಾವಣಗೆರೆ ಮಹಾನಗರ ಪಾಲಕಿಯ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆದಿದ್ದು, ಬಿಜೆಪಿ ಪಕ್ಷದಿಂದ ಬಿ.ಜೆ. ಅಜಯ್ ಕುಮಾರ್, ಕಾಂಗ್ರೆಸ್ ಪಕ್ಷದಿಂದ ದೇವರಮನಿ ಶಿವಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಕಾಂಗ್ರೆಸ್ ಮತದಾನ ಪ್ರಕ್ರಿಯೆಯಿಂದ ಹೊರಗುಳಿದಿದೆ. Share

Read More »

ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ

ದಾವಣಗೆರೆ: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ 2 ತಿಂಗಳ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಖಾಸಗಿ ತರಬೇತಿ ಸಂಸ್ಥೆಗಳ ಮೂಲಕ ಐ.ಬಿ.ಪಿ.ಎಸ್. ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2020ನೇ ಮಾರ್ಚ್ 2ನೇ ತಾರೀಖಿನಿಂದ ತರಬೇತಿ ನೀಡಲಾಗುವುದು. ಈ ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಈ ಕಚೇರಿಯಿಂದ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಉದ್ಯೋಗ …

Read More »
error: Content is protected !!