Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಬೆಳಗಾವಿ

ಬೆಳಗಾವಿ

ವಿಮಾನ ಸಂಚಾರ ರದ್ದು ಗೊಳಿಸಲಾಗಿದೆ.

ಬೆಳಗಾವಿ : ತೌಕ್ತೆ ಚಂಡಮಾರುತದ ಬಿಸಿ ವಿಮಾನ ಸಂಚಾರಕ್ಕೂ ತಟ್ಟಿದ್ದು ಪ್ರತಿಕೂಲ ಹವಾಮಾನದಿಂದಾಗಿ ಹೈದರಾಬಾದ್ ಹಾಗೂ ತಿರುಪತಿ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ, ಬೆಳಗಾವಿ ಸುತ್ತ ಭಾನುವಾರ ಬೆಳಿಗ್ಗೆಯಿಂದ ಭಾರೀ ಗಾಳಿ ಹಾಗೂ ಮಳೆ ಸುರಿಯುತ್ತಿದ್ದು ಇದರಿಂದಾಗಿ ಹೈದರಾಬಾದ್ ಹಾಗೂ ತಿರುಪತಿ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.ಪರಿಸ್ಥಿತಿಯನ್ನು ನೋಡಿಕೊಂಡು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸೂಚನೆಯಂತೆ ಕ್ರಮವಹಿಸಲಾಗುವದು ಎಂದು ತಿಳಿಸಿದ್ದಾರೆ. …

Read More »

ರೈತರಲ್ಲಿ ಮನವಿ ಮಾಡಿಕೊಂಡ ಈರಣ್ಣ ಕಾಡಾಡಿ.

ಬೆಳಗಾವಿ : ರೈತರ ಅನುಕೂಲಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಈ ಮಸೂದೆಗಳಲ್ಲಿ ತಪ್ಪಿದ್ರೆ ಎತ್ತಿ ತೋರಿಸಿದ್ರೆ ಸರಿಪಡಿಸುತ್ತೇವೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಭಾರತ್​​ ಬಂದ್ ಮಾಡಬೇಡಿ ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರೈತರಲ್ಲಿ ಮನವಿ ಮಾಡಿದ್ದಾರೆ. ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೃಷಿ ಹಾಗೂ ಕೃಷಿ …

Read More »

ಹೊಸ ವರ್ಷದ ಸಂಭ್ರಮಾಚರಣೆಗೆ ಕಡಿವಾಣ ಅಗತ್ಯ.

ಬೆಳಗಾವಿ : ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕುವ ಅಗತ್ಯ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಎರಡನೇ ಅಲೆ ಕಾರಣದಿಂದಾಗಿ ಬಹಿರಂಗವಾಗಿ ಬಹಳ ಜನ ಸೇರಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಕಡಿವಾಣ ಹಾಕಲೇಬೇಕಿದೆ. ಆದರೆ, ಈ ಅವಧಿಯಲ್ಲಿ ನೈಟ್ ಕರ್ಫ್ಯೂ‌ ವಿಧಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೈಗೊಳ್ಳಬಹುದಾದ …

Read More »

ಪುತ್ರನ ಮದುವೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಡ್ಯಾನ್ಸ್.

ಬೆಳಗಾವಿ : ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ನಡೆದ ಮಗನ ಮದುವೆ ಪೂರ್ವ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಸಖತ್ ಸ್ಟೆಪ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲ ದಿನಗಳ ಹಿಂದೆ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆರತಕ್ಷತೆ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್ ಜತೆಗೆ ಡ್ಯಾನ್ಸ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ಹೌಸ್ ಫುಲ್-4 ಚಿತ್ರದ ಬಾಲಾ …

Read More »

ಸರ್ಕಾರದ ವಿರುದ್ಧ ಧರಣಿ ಕುಳಿತ ಸಂತ್ರಸ್ತರು.

ಬೆಳಗಾವಿ: ಕಳೆದ ಒಂದೂವರೆ ವರ್ಷದ ಹಿಂದೆ ಜಿಲ್ಲೆಯಲ್ಲಿ ಉಂಟಾದ ಜಲ ಪ್ರಳಯದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿದ್ದವು. ಅದರಲ್ಲಿ ಹಲವಾರು ಸಂತ್ರಸ್ತರು ಇಂದಿಗೂ ಸರ್ಕಾರದ ಪರಿಹಾರ ಸಿಗದೇ ಬೀದಿಯಲ್ಲಿ ಬದುಕುವಂತಾಗಿದ್ದು, ಕೂಡಲೇ ನೆರೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಒಂದೂವರೆ ವರ್ಷದ ಹಿಂದೆ ಉಂಟಾದ ಜಲ ಪ್ರಳಯದಲ್ಲಿ ಹಲವಾರು ರೈತರು ತಮ್ಮ, ಜಮೀನು ಕಳೆದುಕೊಂಡು ಕಂಗಾಲಾಗಿದ್ದರು. ಈ ಸಂದರ್ಭದಲ್ಲಿ ಸರ್ಕಾರ ಪರಿಹಾರದ ಭರವಸೆಯನ್ನು ನೀಡಿದ್ದು, ಜಿಪಿಎಸ್ ಮಾಡುವ ಮೂಲಕ ಮನೆ …

Read More »

ಕುರುಬ ಸಮಾಜಕ್ಕೆ ST ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಲ್ಲ.

ಬೆಳಗಾವಿ: ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರಿಸುವಂತೆ ಆಗ್ರಹಿಸಿ ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಕೊನೆ ದಿನ ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಿದ್ದೇವೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು. ನಗರದ ಕಣಬರಗಿ ರಸ್ತೆಯ ಸಂಕಲ್ಪ ಗಾರ್ಡನ್‍ನಲ್ಲಿ ಕುರುಬ ಸಮುದಾಯ ಎಸ್‍ಟಿಗೆ ಸೇರಿಸುವ ನಿಟ್ಟಿನಲ್ಲಿ ವಿವಿಧ ಸ್ವಾಮೀಜಿಗಳು, ಸಮಾಜದ ಮುಖಂಡರ ಉಪಸ್ಥಿತಿಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದರು. ಕುರುಬ ಸಮಾಜಕ್ಕೆ …

Read More »

ಅಕ್ರಮ ಗೋವಾ ಮದ್ಯ ವಶ.

ಬೆಳಗಾವಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.5 ಲಕ್ಷ ರೂ.ಸಾರಾಯಿ ಸಮೇತ ಓರ್ವ ವ್ಯಕ್ತಿಯನ್ನು ಅಬಕಾರಿ ಇಲಾಖೆ ಪೊಲೀಸರು ಇಂದು ಸಂಜೆ ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬಾದರವಾಡಿ ಗ್ರಾಮದ ಅಶೋಕ ಸುರೇಶ ಪಾಟೀಲ (25) ಬಂಧಿತ ಆರೋಪಿ. ಇನ್ನೋರ್ವ ಆರೋಪಿ ಲಕ್ಷ್ಮಣ ಸಾಂತೇರಿ ಪಾಟೀಲ ಬಂಧನಕ್ಕೆ ಅಬಕಾರಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇನ್ನು ಬಂಧಿತ ಆರೋಪಿ ಗೋವಾದಿಂದ ಖಾನಾಪೂರ ಕಣಕುಂಬಿ ಮಾರ್ಗವಾಗಿ ಅಕ್ರಮ ಮದ್ಯವನ್ನು ಸಾಗಿಸುವ ವೇಳೆ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ನಡೆಸುವಾಗ ಆರೋಪಿ …

Read More »

ರಸ್ತೆ ಅಪಘಾತ : ವಿದ್ಯಾರ್ಥಿ ಸ್ಥಳದಲ್ಲೇ ಸಾವು.

ಬೆಳಗಾವಿ: ಬೈಕ್​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಲ್ಲಿನ ಭಾಗ್ಯ ನಗರದಲ್ಲಿ ನಡೆದಿದೆ. ತನಯ್ ಹುಯಿಲಗೋಳ (17) ಮೃತ ದುರ್ದೈವಿ. ಬೈಕ್ ಮೇಲೆ ಹೋಗುತ್ತಿದ್ದ ಸಮಯದಲ್ಲಿ ಭಾಗ್ಯ ನಗರ 3ನೇ ಕ್ರಾಸ್ ಬಳಿ ಈತನ ಬೈಕ್‍ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ತನಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತ ಬೆಳಗಾವಿಯ ಪ್ರಸಿದ್ಧ ಚಾರ್ಟಡ್ ಅಕೌಂಟೆಂಟ್ ಮನೋಜ ಹುಯಿಲಗೋಳ ಅವರ ಏಕೈಕ ಪುತ್ರನಾಗಿದ್ದು, ಮಗನನ್ನು …

Read More »

ಹಿಂದುತ್ವವಾದಿಗೆ ಸಿಗಲಿದೆ ಬೆಳಗಾವಿ ಲೋಕಸಭಾ ಟಿಕೆಟ್.

ಬೆಳಗಾವಿ : ಹಿಂದುತ್ವದ ಕೇಂದ್ರ ಬಿಂದು ಆಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಯಾವುದೇ ಕಾರಣಕ್ಕೂ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್​ ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತಾ ಪ್ರಶ್ನೆ ಇಲ್ಲ. ಎಲ್ಲ ಒಟ್ಟಿಗೆ ಕುಳಿತು ರಾಷ್ಟ್ರದ ನಾಯಕರ ಜೊತೆ ಚರ್ಚೆ‌ ಮಾಡ್ತೀವಿ. ಯಾರು …

Read More »

ಸಂತೋಷ್ ವೀಡಿಯೋ ಡಿಕೆಶಿ ಬಳಿ ಇದ್ದರೆ ಬಿಡುಗಡೆ ಮಾಡಲಿ : ಈಶ್ವರಪ್ಪ ಸವಾಲು.

ಬೆಳಗಾವಿ : ಮುಖ್ಯಮಂತ್ರಿ ‌ರಾಜಕೀಯ ಕಾರ್ಯದರ್ಶಿ ಎನ್‌ ಆರ್ ಸಂತೋಷ್ ಆತ್ಮಹತ್ಯೆ ಯತ್ನ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆಗೆ ಸಚಿವ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿ ಕೆ ಶಿವಕುಮಾರ್ ಮುಟ್ಠಾತನದ ಹೇಳಿಕೆ ನೀಡಿದ್ದಾರೆ. ಈ ರೀತಿ ಹೇಳಿಕೆ ಕೊಡೋಕೆ ಡಿ ಕೆ ಶಿವಕುಮಾರ್​​​ಗೆ ನಾಚಿಕೆ ಆಗಬೇಕು. ವಿಡಿಯೋ ಲೀಕ್ ಆಗಿದೆ ಅಂದ್ರೆ ಆ ವಿಡಿಯೋ ಇವರ ಹತ್ತಿರ ಇರಬೇಕಲ್ವಾ?ಎಂದು ಪ್ರಶ್ನಿಸಿದ್ದಾರೆ. ಡಿ ಕೆ …

Read More »

ಸಿಎಂ ಕರೆದ ಸಭೆಗೆ ನಾನು ಹೋಗಲಾರೆ: ಅಣ್ಣಾಸಾಹೇಬ್ ಜೊಲ್ಲೆ.

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ ಸಂಸದರ ಸಭೆ ಕರೆದಿದ್ದು, ನಾನು‌ ಸಭೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ನಿನ್ನೆಯಷ್ಟೇ ನಾನು ಬೆಂಗಳೂರಿನಿಂದ ಬೆಳಗಾವಿಗೆ ಮರಳಿದ್ದೇನೆ. ನಾನು ಅಲ್ಲಿಂದ ಹೊರಟ ನಂತರವೇ ಸಭೆ ನಿಗದಿ ಆಗಿದೆ. ಇಂದು ಡಿಸಿಸಿ ಬ್ಯಾಂಕ್ ಬೋರ್ಡ್ ಸಭೆಯಿದೆ. ಡಿಸಿಸಿ ಬ್ಯಾಂಕ್ ಬೋರ್ಡ್ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಸಿಎಂ ಕರೆದ ಸಭೆಯಲ್ಲಿ …

Read More »

ಹೆದ್ದಾರಿ ತಡೆಗೆ ಯತ್ನಿಸಿದ ವಾಟಾಳ್ ನಾಗರಾಜ್.

ಬೆಳಗಾವಿ: ಮರಾಠಾ ನಿಗಮ ಸ್ಥಾಪನೆ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಮಹೇಶ ಅವರನ್ನು ಪೊಲೀಸರು ವಶಕ್ಕೆ ಪಡೆದರು. ವಾಟಾಳ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಬೆಳಗಾವಿ ಹೊರವಲಯದ ಸುವರ್ಣ ಸೌಧದ ಎದುರು ಇಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದವು. ಹೆದ್ದಾರಿ ತಡೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವಾಟಾಳ್ ಹಾಗೂ ಸಾರಾ ಮಹೇಶ ಇದ್ದ ಕಾರನ್ನು ಹಿರೇಬಾಗೇವಾಡಿ ಟೋಲ್​ …

Read More »

ನಾಳೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಅದ್ದೂರಿ ವಿವಾಹ.

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ.ಹಿತಾ ಅವರ ಅದ್ಧೂರಿ ವಿವಾಹ ನಾಳೆ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್​​​​​ನಲ್ಲಿ ನಡೆಯಲಿದೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರ ಸಹೋದರ ಶಿವಕುಮಾರ್ ಪುತ್ರಿ ಡಾ.ಹಿತಾ ಜೊತೆಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ನಾಳೆ ಸಪ್ತಪದಿ ತುಳಿಯಲಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಕುಟುಂಬಸ್ಥರು ಗೋವಾಗೆ ಬಂದಿಳಿದಿದ್ದು, ಈಗಾಗಲೇ ಮದುವೆ ಪೂರ್ವ ಕಾರ್ಯಕ್ರಮಗಳು ವೈಭವದಿಂದ ನೆರವೇರುತ್ತಿವೆ. ನಿನ್ನೆ ರಾತ್ರಿ ಮೆಹಂದಿ ಕಾರ್ಯಕ್ರಮ ನೆರವೇರಿದ್ದು, ಇಂದು ಹಳದಿ …

Read More »

ಬೆಳಗಾವಿ ಸುವರ್ಣಸೌಧದ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.

ಬೆಳಗಾವಿ : ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುವ ಹಿನ್ನೆಲೆ, ಸುವರ್ಣಸೌಧದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪತ್ರಿಕ್ರಾ ಪ್ರಕಟಣೆ ಹೊರಡಿಸಿರುವ ಅವರು, ತಾಲೂಕಿನ ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಸಂಘ-ಸಂಸ್ಥೆಗಳ ಮುಖಂಡರು, ಸಣ್ಣಪುಟ್ಟ ವಿಷಯಕ್ಕೂ ಪದೆ ಪದೇ ಸುವರ್ಣ ಸೌಧದ ಎದುರಿಗೆ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಹೀಗಾಗಿ, …

Read More »
error: Content is protected !!