Hiring Reporter’s For more Information Contact Above Number 876 225 4007 . Program producer
Home / Breaking News / ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್‌ಐಆರ್’ ದಾಖಲು

ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್‌ಐಆರ್’ ದಾಖಲು

Spread the love

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್‌ಐಆರ್ ದಾಖಲಿಸಿದೆ.

ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ ಆದಾಯ 33.92 ಕೋಟಿ ರೂಪಾಯಿಯಿಂದ 128.60 ಕೋಟಿ ರೂಪಾಯಿಯಷ್ಟು ಏರಿಕೆ ಆಗಿದೆ. ಅವರು ಆದಾಯಕ್ಕೂ ಮೀರಿ ಶೇಕಡ 44 ರಷ್ಟು ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗಿದ್ದು ಆದಾಯಕ್ಕೂ ಮೀರಿ ಆಸ್ತಿಗಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ.

ಅಕ್ರಮ ಆಸ್ತಿಗಳಿಕೆ ಕುರಿತಾಗಿ ಡಿ.ಕೆ. ಶಿವಕುಮಾರ್ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಿಂದೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸಿ ಭ್ರಷ್ಟಾಚಾರ ಪ್ರಕರಣ ಉಲ್ಲಂಘನೆಯಾದ ಬಗ್ಗೆ ಮಾಹಿತಿ ಬಂದಿತ್ತು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!