Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸಿಎಂ ನನಗೆ ಎರಡು ಖಾತೆ ನೀಡಿದ್ದಾರೆ

ಸಿಎಂ ನನಗೆ ಎರಡು ಖಾತೆ ನೀಡಿದ್ದಾರೆ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ವಿಚಾರ ಹಲವು ನಾಯಕರಲ್ಲಿ ಅಸಾಮಾಧಾನ ಬುಗಿಲೆದ್ದಿದ್ದು, . ಇದೀಗ ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು ಸಿಎಂ ನನಗೆ ಎರಡು ಖಾತೆ ಕೊಟ್ಟಿದ್ದಾರೆ. ರಾತ್ರಿ ಹೊತ್ತು ಕಾಡಿನಲ್ಲಿ ಇರಬೇಕು, ಹಗಲು ವೇಳೆ ನಾಡಿಗೆ ಬರಬೇಕು, ಕಾಡು ನಾಡು ಎರಡನ್ನೂ ನೋಡಿಕೊಳ್ಳುವ ಜವಬ್ದಾರಿಯನ್ನು ನೀಡಿದ್ದಾರೆ ಎಂದರು,

ನಾನು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಇಲಾಖೆಯ ಸುರೇಶ್ ಕುಮಾರ್ ಅವರ ಜೊತೆಗೆ ಶಿಕ್ಷಣ ಸಚಿವನಾಗುತ್ತೇನೆ ಎಂದುಕೊಂಡಿದ್ದೆ. ಅವರ ಜೊತೆಗಾರನಾಗಿ ಕಳುಹಿಸುತ್ತಾರೆ ಎಂದುಕೊಂಡಿದ್ದೆ ಎಂದ ಸಚಿವರು, ನನಗೆ ನೀಡಿರುವ ಎರಡು ಹೊಸ ಖಾತೆಗಳನ್ನ ನಿಭಾಯಿಸಿಲು ದಿನದ 24 ಗಂಟೆ ಬೇಕು.
ಕಾಡಿಗೆ ರಾತ್ರಿ ವೇಳೆ ಹೋದರೆ ಮಾತ್ರ ಅಲ್ಲಿನ ಪರಿಸ್ಥಿತಿ ಗೊತ್ತಾಗುತ್ತದೆ. ಪ್ರಾಣಿಗಳು ಓಡಾಡುವುದೆ ರಾತ್ರಿ ವೇಳೆ ಎಂದ ಅವರು, ನಾನು ಮೂಲತಃ ಸಿವಿಲ್ ಎಂಜಿನಿಯರ್, ಕಾಡಿನ ಎಂಜಿನಿಯರ್ ಅಲ್ಲ. ಸಾಮಾನ್ಯ ಜನರಿಗೆ ಕಾಡಿನ ಬಗ್ಗೆ ಗೊತ್ತಿರುವಷ್ಟು ನನಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!