Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಚಿತ್ರದುರ್ಗದ ರೈತ ಮಹಿಳೆಗೆ ಸಿಎಂಯಿಂದ ನೀರಾವರಿ ಸೌಲಭ್ಯದ ಆಶ್ವಾಸನೆ

ಚಿತ್ರದುರ್ಗದ ರೈತ ಮಹಿಳೆಗೆ ಸಿಎಂಯಿಂದ ನೀರಾವರಿ ಸೌಲಭ್ಯದ ಆಶ್ವಾಸನೆ

Spread the love

ಚಿತ್ರದುರ್ಗ: ಚಿತ್ರದುರ್ಗದ ರೈತ ಮಹಿಳೆ ವಸಂತಮ್ಮಳಿಗೆ ಮುಂದಿನ ದಿನಗಳಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಆಶ್ವಾಸನೆಯನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ “ಆಡಳಿತ 1 ವರ್ಷ, ಸವಾಲುಗಳ ವರ್ಷ- ಪರಿಹಾರದ ಸ್ಪರ್ಶ” ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಚಿತ್ರದುರ್ಗದ ವಸಂತಮ್ಮಳನ್ನು ಆಹ್ವಾನಿಸಲಾಗಿತ್ತು. ಈ ಸಂದರ್ಭ ಮುಖ್ಯಮಂತ್ರಿಗಳು ಈ ಆಶ್ವಾಸನೆಯನ್ನು ನೀಡಿದ್ದಾರೆ.

ಕೊರೊನಾ ವೈರಸ್ ಲಾಕ್ ಡೌನ್ ಸಮಯದಲ್ಲಿ ಚಿತ್ರದುರ್ಗದ ಹಿರಿಯೂರಿನ ಕಾಟನಾಯಕನಹಳ್ಳಿ ಗ್ರಾಮದ ಈ ರೈತ ಮಹಿಳೆ ವಸಂತಮ್ಮ, ತಾವು ಬೆಳೆದ ಈರುಳ್ಳಿಯನ್ನು ಮಾರಾಟ ಮಾಡಲಾಗದೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ವಸಂತಮ್ಮಳ ಸಮಸ್ಯೆಯನ್ನು ಗಮನಿಸಿದ ಮುಖ್ಯಮಂತ್ರಿಗಳು ಅವರಿಗೆ ಕರೆಮಾಡಿ ಸಾಂತ್ವಾನ ಹೇಳಿದ್ದರು ಮತ್ತು ಜಿಲ್ಲೆಯ ತೋಟಗಾರಿಕಾ ಅಧಿಕಾರಿಗಳನ್ನು ಸಮಸ್ಯೆಗೆ ಸ್ಪಂದಿಸುವಂತೆ ನಿರ್ದೇಶಿಸಿದ್ದರು.

ಚಿತ್ರದುರ್ಗ ಜಿಲ್ಲಾ ತೋಟಗಾರಿಕಾ ಇಲಾಖೆ ಅಧಿಕಾರಿಗಳು ವಸಂತಮ್ಮ ಬೆಳೆದ ಈರುಳ್ಳಿ ಬೆಳೆಯನ್ನು ಸಾಗಿಸಲು ಮತ್ತು ಮಾರಾಟ ಮಾಡಲು ಸಹಕರಿಸಿದ್ದರು.

Check Also

ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ, ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ: ಪ್ರಮೋದ್​ ಮುತಾಲಿಕ್​

Spread the loveವಿಜಯಪುರ: ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!