Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗಾಗಿ ಸುತ್ತೋಲೆ ಹೊರಡಿಸಿದ ಸರ್ಕಾರ. ‌

ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗಾಗಿ ಸುತ್ತೋಲೆ ಹೊರಡಿಸಿದ ಸರ್ಕಾರ. ‌

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನತೆ ಆತಂಕ ಪಡುವ ಅಗತ್ಯವಿಲ್ಲವೆಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಹೊರದೇಶದಿಂದ ಬಂದ ಸುಮಾರು 40 ಸಾವಿರ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿದೆ. ಇದರಲ್ಲಿ ಸುಮಾರು 240 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಯಾವ ವ್ಯಕ್ತಿಯಲ್ಲೂ ಕೊರೋನ ವೈರಸ್ ಇರುವುದು ದೃಢಪಟ್ಟಿಲ್ಲವೆಂದು ತಿಳಿಸಿದರು.

ಎರಡು ಲ್ಯಾಬ್‌ಗಳು: ಕೊರೋನ ಪರೀಕ್ಷೆ ನಡೆಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಎರಡು ಲ್ಯಾಬ್‌ಗಳನ್ನು ತೆರೆಯಲಾಗಿದೆ. ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಲ್ಯಾಬ್‌ಗಳನ್ನು ತೆರೆಯಲಾಗಿದ್ದು, ಶಂಕಿತ ರೋಗಿಗಳ ರಕ್ತವನ್ನು ಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಮಂಗಳೂರು, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕಗಳಲ್ಲಿ 630 ಹಾಸಿಗಳನ್ನು ಕೊರೋನ ರೋಗಿಗಳಿಗಾಗಿಯೇ ಕಾಯ್ದಿರಿಸಲಾಗಿದೆ ಹಾಗೂ 1,690 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಂತೆ ಸರಕಾರದ ವತಿಯಿಂದ ಸೂಚನೆ ನೀಡಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೈದ್ಯರ ತಂಡ ನಿಯೋಜನೆ ಮಾಡಲಾಗಿದ್ದು, ದೇಶ ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತಿದೆ. ಅದೇ ರೀತಿ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ಬಂದರು ಸೇರಿದಂತೆ ರಾಜ್ಯದ ಗಡಿ ಭಾಗಗಳಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ವೈದ್ಯಕೀಯ ಸಚಿವ ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಪ್ರಧಾನ ಕಾರ್ಯದರ್ಶಿ ಜಾವೀದ್ ಅಖ್ತರ್ ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಶಾಲೆಗಳಿಗೆ ಸುತ್ತೋಲೆ

ಶೀತ, ಕೆಮ್ಮು, ಕಫ ಹಾಗೂ ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ರಜೆ ನೀಡುವಂತೆ ಶಾಲೆಗಳಿಗೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ವಿಶ್ವದೆಲ್ಲೆಡೆ ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಸೂಚನೆ ನೀಡಲಾಗಿದೆ. ವಿದ್ಯಾರ್ಥಿ, ಸಿಬ್ಬಂದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಅವರಿಗೆ ರಜೆ ಮಂಜೂರು ಮಾಡಿ ಅವರು ಸಂಪೂರ್ಣ ಗುಣಮುಖರಾಗಿರುವ ವೈದ್ಯರ ದೃಢೀರಣ ಪತ್ರದ ನಂತರವೇ ಶಾಲೆಗೆ ಮರಳಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Check Also

ಬಾಲಿವುಡ್ ‘ನಟ ಅಭಿಷೇಕ್ ಬಚ್ಚನ್’ ಕೊರೋನಾದಿಂದ ಗುಣಮುಖ

Spread the loveನವದೆಹಲಿ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೂ ಜುಲೈ 11ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!