Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸಿಎಂ ಬಿ.ಎಸ್. ವೈ. ಹೇಳಿಕೆಗೆ ಸಹಮತ ಇದೆ: ಹೊರಟ್ಟಿ.

ಸಿಎಂ ಬಿ.ಎಸ್. ವೈ. ಹೇಳಿಕೆಗೆ ಸಹಮತ ಇದೆ: ಹೊರಟ್ಟಿ.

 

ಹುಬ್ಬಳ್ಳಿ: ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜಾ, ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಹಮತವಿದ್ದು, ಮಾತು ಕೊಟ್ಟ ರೀತಿ ನಡೆದುಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿಂದು ಬಿಜೆಪಿ ಕೋರ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರಿಂದ ನಮ್ಮ ಸರಕಾರ ಬಂದಿದೆ ಎಂಬ ಸಿಎಂ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರು ಬಿಜೆಪಿಯವರನ್ನು ನಂಬಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳ ಹೇಳಿಕೆಗೆ ನನ್ನ ಸಹಮತ ವಿದೆ ಎಂದರು.
ಇನ್ನೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್ ವೈ ಮಾತುಕತೆ ಮಾಡಿರುವುದು ಸರಕಾರ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿ ಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದರು.
ರಾಜ್ಯದಲ್ಲಿ ಅತಿ ಮಳೆಯಿಂದ ಪ್ರವಾಹ ಪರಿಸ್ಥಿತಿಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮರು ಚುನಾವಣೆ ಬೇಡ ಎಂದು ಹೇಳಿದ್ದಾರೆ. ಅದಕ್ಕೆ ಬಿಜೆಪಿಗೆ ಬೆಂಬಲ ಸೂಚಿಸಲು ತಿರ್ಮಾಣಿಸಿರಬಹುದು. ಈ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಮಾಜಿ ಪ್ರಧಾನಿ ದೇವೆಗೌಡರ ಜೊತೆಗೆ ಈ ಹಿಂದೆ ಮಾತನಾಡಿದ್ದೇನೆ. ಅವರು ಹಿಂದೆ ನಡೆದ ಘಟನೆಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಅಂತಾ ಹೇಳಿದ್ದಾರೆ ಎಂದರು.
ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವ ವಿಚಾರ ತಪ್ಪು. ಇದರ ಪರಿಣಾಮ ಮಕ್ಕಳ ಮೇಲೆ ಆಗುವುದು. ಈ ಹಿನ್ನಲೆಯಲ್ಲಿ ಶಿಕ್ಷಕರು ಪಾಠ ಮಾಡಬೇಕಾ, ಅಥವಾ ಬೇಡವಾ ಎಂಬ ಆತಂಕದಲ್ಲಿ ಕಾಲ ಕಳೆಯುವಾಗುವುದು. ಹೀಗಾಗಿ ತಕ್ಷಣವೇ ಇತಿಹಾಸ ತಜ್ಞರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!