Hiring Reporter’s For more Information Contact Above Number 876 225 4007 . Program producer
Home / Breaking News / ಆರೋಗ್ಯ ಖಾತೆ ಕಿತ್ತುಕೊಂಡ ಸಿಎಂ, ಶ್ರೀರಾಮುಲು ಅಸಮಾಧಾನ

ಆರೋಗ್ಯ ಖಾತೆ ಕಿತ್ತುಕೊಂಡ ಸಿಎಂ, ಶ್ರೀರಾಮುಲು ಅಸಮಾಧಾನ

Spread the love

ಬೆಂಗಳೂರು: ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವುದರಿಂದ ತಮ್ಮ ಖಾತೆ ಬದಲಾವಣೆ ಮಾಡುವುದಕ್ಕೆ ಸಚಿವ ಶ್ರೀರಾಮುಲು ವಿರೋಧ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿದ್ದ ಅವರು ದಿಢೀರನೆ ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿ ಖಾತೆ ಬದಲಾವಣೆ ಮಾಡಿದಂತೆ ಮನವಿ ಮಾಡಿದ್ದಾರೆ.

ಕೋವಿಡ್-19 ಸಂದರ್ಭದಲ್ಲಿ ನನ್ನ ಖಾತೆಯನ್ನು ಬದಲಾಯಿಸಿದರೆ ಸಚಿವನಾಗಿ ಇಲಾಖೆಯನ್ನು ನಿಭಾಯಿಸಲು ವಿಫಲನಾದೆ ಎಂಬ ಸಂದೇಶ ರಾಜ್ಯದ ಜನತೆಗೆ ರವಾನೆಯಾಗುತ್ತದೆ.

ಅಲ್ಲದೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ವಿರೋಧ ಪಕ್ಷದವರು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಈಗ ನನ್ನ ಖಾತೆ ಬದಲಾಯಿಸಿದರೆ ಇದಕ್ಕೆ ಇನ್ನಷ್ಟು ಪುಷ್ಟಿ ನೀಡಿದಂತಾಗುತ್ತದೆ. ಸದ್ಯದ ಸ್ಥಿತಿಯಲ್ಲಿ ಖಾತೆ ಬದಲಾವಣೆ ಬೇಡ ಎಂದು ಸಿಎಂಗೆ ಬೇಡಿಕೆ ಇಟ್ಟಿದ್ದಾರೆ.

ಈ ಹಿಂದೆಯೂ ನಾನು ಇದೇ ಖಾತೆಯನ್ನು ನಿಭಾಯಿಸಿದ್ದೇನೆ. ಕಳೆದ ಮಾರ್ಚ್ ತಿಂಗಳಿನಿಂದಲೂ ಅಕಾರಿಗಳ ಜತೆ ಹಗಲು-ರಾತ್ರಿ ಕೆಲಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈಗ ಕಳಂಕ ಹೊತ್ತು ಇಲ್ಲವೆ ವಿಫಲ ಸಚಿವ ಎಂಬ ಆಪಾದನೆ ಹೊತ್ತುಕೊಂಡು ಇಲಾಖೆಯಿಂದ ವಿಮುಖನಾಗುವುದಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂದು ಗೊತ್ತಾಗಿದೆ.

ಮೊದಲೇ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದರೆ ನಾನು ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ. ಸಂಪುಟ ವಿಸ್ತರಣೆಯಾದ ನಂತರ ನೀವೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಹೊಣೆಗಾರಿಕೆಯನ್ನು ನಿಭಾಯಿಸಬೇಕೆಂದು ಸೂಚಿಸಿದ್ದಿರಿ. ನಿಮ್ಮ ನಿರ್ಧಾರಕ್ಕೆ ಮರು ಮಾತನಾಡದೆ ಒಪ್ಪಿಕೊಂಡು ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಈಗ ಏಕೆ ಖಾತೆ ಬದಲಾವಣೆ ಮಾಡುತ್ತಿದ್ದೀರೆಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ನೀವು ಅಸಮರ್ಥ ಎಂಬ ಕಾರಣಕ್ಕೆ ನಾನು ಖಾತೆ ಬದಲಾವಣೆ ಮಾಡಲು ಮುಂದಾಗಿಲ್ಲ. ಉಪ ಚುನಾವಣೆ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು , ಕೆಲವು ಮಹತ್ವದ ಖಾತೆಗಳನ್ನು ಬದಲಾವಣೆ ಮಾಡಬೇಕಾಗಿದೆ.

ಅಲ್ಲದೆ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ವೃತ್ತಿಯಲ್ಲಿ ವೈದ್ಯರಾಗಿರುವುದರಿಂದ ಈ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ. ನೀವು ಹಿಂದುಳಿದ ವರ್ಗ ಜತೆಗೆ ಸಮಾಜ ಕಲ್ಯಾಣ ಖಾತೆಯ ಜವಾಬ್ದಾರಿಯನ್ನು ನೋಡಿಕೊಳ್ಳಬೇಕೆಂಬುದು ಕೇಂದ್ರ ವರಿಷ್ಠರ ಸೂಚನೆಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಆದರೆ ಇದನ್ನು ಒಪ್ಪದ ರಾಮುಲು ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ನನ್ನ ಖಾತೆ ಬದಲಾಯಿಸಿದರೆ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಕೆಟ್ಟ ಸಂದೇಶ ಹೋಗುತ್ತದೆ. ಮುಖ್ಯಮಂತ್ರಿಗಳ ನಿರ್ಧಾರವನ್ನು ನಾನು ಪ್ರಶ್ನಿಸುವುದಿಲ್ಲ. ನಾನು ಮತ್ತೊಮ್ಮೆ ಸೂಚಿಸಿ ನನಗೆ ನಿರ್ದೇಶನ ನೀಡಬೇಕೆಂದು ರಾಮುಲು ಕೋರಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!