Breaking News
Hiring Reporter’s For more Information Contact Above Number 876 225 4007 . Program producer
Home / Breaking News / ವಿವಾದಕ್ಕೆ ದಾರಿ ಮಾಡಿಕೊಟ್ಟ ಸಿಎಂ ಭಾಷಣ.

ವಿವಾದಕ್ಕೆ ದಾರಿ ಮಾಡಿಕೊಟ್ಟ ಸಿಎಂ ಭಾಷಣ.

ಬೆಳಗಾವಿ : ಕಾಗವಾಡ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಗೆದ್ದರೆ ಅವರನ್ನು ಮಂತ್ರಿ ಮಾಡುವುದು ಖಚಿತ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಕಾಗವಾಡ ಕ್ಷೇತ್ರದ ಶಿರಗುಪ್ಪಿ ಗ್ರಾಮದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಿ.ಎಸ್.ವೈ, ಉಪಚುನಾವಣೆಯಲ್ಲಿ ವೀರಶೈವರ ಒಂದು ವೋಟು ಆಚೆ ಇಚೆ ಆಗಬಾರದು. ನನ್ನನ್ನು ಸಿಎಂ ಮಾಡಿದ್ದಾರೆ, ನಂಬಿಕೆದ್ರೋಹಿಗಳಿಗೆ ಪಾಠ ಕಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಇನ್ನು ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ಗೆದ್ದರೆ ಮಂತ್ರಿ ಮಾಡುತ್ತೇನೆ, ಈ ಬಗ್ಗೆ ಕೇಂದ್ರದ ನಾಯಕರ ಜೊತೆ ಮಾತನಾಡಿದ್ದಾಗಿದೆ ಎಂದರು. ಡಿಸಿಎಂ ಲಕ್ಷ್ಮಣ್ ಸವದಿ ಮೂರೂವರೆ ವರ್ಷ ಕಾಲ ಡಿಸಿಎಂ ಆಗಿ ಇರುತ್ತಾರೆ ಎಂದು ತಿಳಿಸಿದರು.
ಇನ್ನು ತಾವು ಕಳೆದ 120 ದಿನದಿಂದ ಒಂದು ದಿನವೂ ಮನೆಯಲ್ಲಿ ಇಲ್ಲ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. 15 ಕ್ಷೇತ್ರಗಳ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಅನುದಾನ ಕೊಟ್ಟಿರುವುದಾಗಿ ಸಿಎಂ ತಿಳಿಸಿದರು.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್, ತಾವು ಕ್ಷೇತ್ರದ ಅಭಿವೃದ್ಧಿಗೆ ರಾಜೀನಾಮೆ ನೀಡಿದ್ದೇನೆ. ತಾವು ಆಪರೇಷನ್ ಕಮಲ ಮಾಡಲು ಸಾವಿರಾರು ಕೋಟಿ ಹಣ ಪಡೆದಿದ್ದೇನೆ ಎಂದು ಹೇಳುತ್ತಾರೆ. ಆದರೆ,ನಾನು ಒಂದು ರೂಪಾಯಿ ಹಣವನ್ನೂ ಪಡೆದಿಲ್ಲ. ಮಕ್ಕಳ ಮೇಲೆ ಆಣೆ ಮಾಡಿ ಹೇಳ್ತೇನೆ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣೆ ಸಂದರ್ಭದಲ್ಲಿ ಯಾವುದೇ ಜಾತಿ, ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವುದನ್ನು ನಿರ್ಬಂಧಿಸಲಾಗಿರುತ್ತದೆ ಹೀಗಿರುವಾಗ ಖುದ್ದು ಸಿಎಂ ವೀರಶೈವರ ಮತ ಬೇರೆ ಪಕ್ಷಕ್ಕೆ ಹೋಗಬಾರ್ದು ಅಂತ ಕೇಳುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!