Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಗೋಕಾಕ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಯಡಿಯೂರಪ್ಪಗೆ ಸಮನ್ಸ್

ಗೋಕಾಕ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಯಡಿಯೂರಪ್ಪಗೆ ಸಮನ್ಸ್

Spread the love

ಬೆಳಗಾವಿ: ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವಿಲ್ ಜಡ್ಜ್ ಜೆಎಂಎಫ್ ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು, ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು. ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಗೋಕಾಕ್ ಪೊಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು. ಆದರೆ ನ್ಯಾಯಾಲಯ ಇದನ್ನು ತಿರಸ್ಕರಿಸಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ 1ರಂದು ನ್ಯಾಯಾಲಯಕ್ಕೆ ಹಾಜರಾಗುತೆ ಸಮನ್ಸ್ ಜಾರಿ ಮಾಡಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!