Hiring Reporter’s For more Information Contact Above Number 876 225 4007 . Program producer
Home / Breaking News / ವಿಷ್ಣುವರ್ಧನ್‌ ಸ್ಮಾರಕಕ್ಕೆ ಸಿಎಂ ಯಡಿಯೂರಪ್ಪ ಭೂಮಿಪೂಜೆ

ವಿಷ್ಣುವರ್ಧನ್‌ ಸ್ಮಾರಕಕ್ಕೆ ಸಿಎಂ ಯಡಿಯೂರಪ್ಪ ಭೂಮಿಪೂಜೆ

Spread the love

ಮೈಸೂರು: ಇಲ್ಲಿನ ಹೊರ ವಲಯದ ಉದ್ದೂರ್ ಪ್ರದೇಶದಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕಕ್ಕೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆನ್‌ಲೈನ್‌ ಮೂಲಕ ಭೂಮಿಪೂಜೆ ನೆರವೇರಿಸಿದರು.

ವಿಷ್ಣುವರ್ಧನ್‌ ನಿಧನರಾದ 11 ವರ್ಷಗಳ ಬಳಿಕ ಎದ್ದು ನಿಲ್ಲುತ್ತಿದೆ ಅವರ ಸ್ಮಾರಕ. ಸ್ಮಾರಕದ ನಿರ್ಮಾಣದ ಜಾಗ ವಿಚಾರವಾಗಿ ಹಲವು ವರ್ಷಗಳಿಂದ ವಿವಾದವಿತ್ತು. ಕೊನೆಗೂ ಅದು ಬಗೆಹರಿದು ಇದೀಗ ಸ್ಮಾರಕ ನಿರ್ಮಾಣಕ್ಕೆ ಚಾಲನೆ ದೊರಕಿದೆ. ಇದಕ್ಕಾಗಿ ಸರ್ಕಾರ ₹ 11 ಕೋಟಿ ಅನುದಾನ ನೀಡಿದೆ.

ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವಿಷ್ಣುವರ್ಧನ್‌ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಮತ್ತು ಇತರರು ಭಾಗವಹಿಸಿದ್ದರು.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!