Hiring Reporter’s For more Information Contact Above Number 876 225 4007 . Program producer
Home / Breaking News / ತುಮಕೂರು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

ತುಮಕೂರು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

Spread the love

ತುಮಕೂರು: ಜಲಜೀವನ್‌ ಮಿಷನ್‌ ಯೋಜನೆಗೆ ತುಮಕೂರು ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಸಂಸದ ಜಿ.ಎಸ್‌.ಬಸವರಾಜ್‌ ಮನವಿ ಮೇರೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅತೀಕ್‌ ಅವರಿಗೆ ಆದೇಶ ನೀಡಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಅವರ ಸೂಚನೆ ಮೇರೆಗೆ ಬೆಂಗಳೂರಿನಲ್ಲಿ ಅತೀಕ್‌ ಅವರೊಂದಿಗೆ ಜಿ.ಎಸ್‌.ಬಸವರಾಜ್‌ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್‌ ಇದ್ದರು. ಈ ಯೋಜನೆಗೆ ಪೂರಕವಾಗಿ ತುಮಕೂರು ಜಿಲ್ಲೆಗೆ ಹೇಮಾವತಿ ಯೋಜನೆಯಿಂದ ಕುಡಿಯುವ ನೀರಿಗೆ 6.237 ಟಿಎಂಸಿ ನೀರು, ಭದ್ರಾ ಮೇಲ್ದಂಡೆಯಿಂದ ಕೆರೆಗಳಿಗೆ/ಕುಡಿಯುವ ನೀರಿಗೆ 3.025 ಟಿಎಂಸಿ ನೀರು, ಎತ್ತಿನಹೊಳೆ ಯೋಜನೆಯಿಂದ ಕುಡಿಯುವ ನೀರಿಗೆ 2.43 ಟಿಎಂಸಿ ನೀರು, ಕೆರೆಗಳಿಗೆ 2.16 ಟಿಎಂಸಿ ನೀರು, ತುಂಗಭದ್ರಾ ನದಿಯಿಂದ ಕುಡಿಯುವ ನೀರಿಗಾಗಿ 0.745 ಎಂಸಿಎಫ್‌ಟಿ (0.75 ಟಿಎಂಸಿ) ಒಟ್ಟು ಕುಡಿಯುವ ನೀರಿಗಾಗಿಯೇ 14.602 ಟಿಎಂಸಿ ನೀರು ನಿಗದಿ ಮಾಡಲಾಗಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!