Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಶೀಘ್ರವೇ ಶುರುವಾಗಲಿದೆ 1 -8 ನೇ ತರಗತಿ

ಶೀಘ್ರವೇ ಶುರುವಾಗಲಿದೆ 1 -8 ನೇ ತರಗತಿ

ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿಗಳನ್ನು ಶೀಘ್ರವೇ ಆರಂಭಿಸಲು ಚಿಂತನೆ ನಡೆಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ನಂಜಯ್ಯಗಾರಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಅವರು ಮಾತನಾಡಿ, ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ 2ನೇ ವಾರ ಇಲ್ಲವೇ 3 ನೇ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ಒಂದರಿಂದ ಎಂಟನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ತೀರ್ಮಾನಿಸಲಾಗುವುದು. 9, 10 ಹಾಗೂ ಪಿಯುಸಿ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದು, ಶೇಕಡ 80 ರಷ್ಟು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!