Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಜೋಶಿ

ಅರ್ಥವಿಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ : ಜೋಶಿ

ಹುಬ್ಬಳ್ಳಿ,ನ.03-ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಅಸಮಾಧಾನವಿತ್ತು. ಇದೀಗ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾರೆ ಅದಕ್ಕೆ ಅರ್ಥವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
‌ ನಗರದಲ್ಲಿಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅನರ್ಹ ಪರ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೊದಲನೇಯದಾಗಿ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆದಿಲ್ಲ. ಉಪಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆದಿದೆ ಎಂದರು.
ಇನ್ನೂ ಈ ಹಿಂದೆಯೇ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಮೇಲೆ ಅಸಮಾಧಾನವಿತ್ತು. ಆಗ ಸುಮ್ಮನೆ ಇದ್ದು ಇದೀಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳು ಆಗಿರುವುದರಿಂದ ಕಾಂಗ್ರೆಸ್ ನವರು ಕೆಲಸವಿಲ್ಲದೇ ಅರ್ಥವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಇನ್ನೂ ಸಮ್ಮಿಶ್ರ ಸರ್ಕಾರ ಪತನಕ್ಕೆ ಡಿ.ಕೆ.ಶಿವಕುಮಾರ ಕಾರಣ ಎಂಬ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯ ಕಾಂಗ್ರೆಸ್ ನವರದ್ದು ಆಗಿದ್ದು, ಅವರ ಆಂತರಿಕ ಸಮಸ್ಯೆ ಆಗಿದೆ. ಅಲ್ಲದೇ ರಮೇಶ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ಇದ್ದು ಬಂದವರು. ಹಾಗಾಗಿ ಕಾಂಗ್ರೆಸ್ ನ ಎಲ್ಲ ವಿಷಯಗಳು ಗೊತ್ತಿದೆ. ಅದಕ್ಕೆ ಅವರು ಮಾತನಾಡಿರಬಹುದು ಎಂದರು.

Share

About Shaikh BIG TV NEWS, Hubballi

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!